ಮೋದಿಯವರ ಮೌನ ಭಯವನ್ನು ಸೃಷ್ಟಿಸುತ್ತಿದೆ: ಹರಿಪ್ರಸಾದ್

Source: S.O. News Service | By I.G. Bhatkali | Published on 25th September 2017, 12:28 AM | Coastal News | State News | National News | Don't Miss |

ಭಟ್ಕಳ: ದೇಶದ ಪ್ರಧಾನ ಮಂತ್ರಿಯಾದವರು ಹಿಂಸೆ, ಅಭದ್ರತೆಯ ಖಂಡಿಸಬೇಕು. ಅವರು ಮೌನವಾಗಿರುವುದರಿಂದಲೇ ಕರ್ನಾಟಕ ಕರಾವಳಿಯಲ್ಲಿಯೂ ಗಲಭೆ ಎಬ್ಬಿಸುವ ಕಾರ್ಯವನ್ನು ಅವರ ಬೆಂಬಲಿಗರು ಮಾಡುತ್ತಿದ್ದು, ಭಯದ ವಾತಾವರಣ ಸೃಷ್ಟಿಯಾಗುತ್ತಿದೆ ಎಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ.

 ಅವರು ರವಿವಾರ ಸಂಜೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಭಟ್ಕಳಕ್ಕೆ ಬಂದ ಸಂದರ್ಭದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಿದ್ದರು. ಸಾಮಾಜಿಕ ಜವಾಬ್ದಾರಿ ಎಲ್ಲರ ಮೇಲಿದ್ದು, ಅದನ್ನು ಕಡೆಗಣಿಸಿ ಗಲಭೆಗೆ ಪ್ರೋತ್ಸಾಹವನ್ನು ನೀಡಲಾಗುತ್ತಿದೆ. ಈ ಬಗ್ಗೆ ರಾಜ್ಯ ಸರಕಾರ ಎಚ್ಚರದಿಂದ ಇದ್ದು, ಕಠಿಣ ಕ್ರಮ ಕೈಗೊಳ್ಳುತ್ತಿದೆ. ಕಳೆದ ಬಾರಿ ಕರಾವಳಿಯಲ್ಲಿನ ನೈತಿಕ ಪೊಲೀಸ್‍ಗಿರಿಯಿಂದಾಗಿ ರೋಸಿಹೋದ ಜನರು ಕಾಂಗ್ರೆಸ್‍ಗೆ ಮತ ನೀಡಿ ಗೆಲ್ಲಿಸಿದ್ದಾರೆ. ಈ ಬಾರಿಯೂ ಬಿಜೆಪಿ ಗಲಭೆ ಸೃಷ್ಟಿಸಿ ಚುನಾವಣೆ ಗೆಲ್ಲುವ ಪ್ರಯತ್ನ ನಡೆಸಿದರೆ ಅದು ಸಫಲವಾಗುವುದಿಲ್ಲ. ಜನರಿಗೆ ಇದು ಸ್ಪಷ್ಟವಾಗಿ ಅರ್ಥವಾಗುತ್ತಿದ್ದು, ಮುಂದಿನ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ ಎಂದು ತಿಳಿಸಿದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಉತ್ತರಕನ್ನಡ ಕ್ಷೇತ್ರದಿಂದ ಸ್ಪರ್ಧಿಸಲು ಆಸಕ್ತಿ ಹೊಂದಿರುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾರು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎನ್ನುವ ತೀರ್ಮಾನವನ್ನು ಹೈಕಮಾಂಡ ತೆಗೆದುಕೊಳ್ಳಲಿದೆ. ಪಕ್ಷ ಬಯಸಿದರೆ ಮಾತ್ರ ಸ್ಪರ್ಧಿಸಲು ಸಿದ್ಧರಿರುವುದಾಗಿ ಪ್ರತಿಕ್ರಿಯಿಸಿದರು. 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...