ಮೊಗೇರ್ ಸಮಾಜಕ್ಕೆ ಪರಿಶಿಷ್ಠ ಜಾತಿ ಮಾನ್ಯತೆಗೆ ಆಗ್ರಹಿಸಿ ಆ.13 ರಂದು ಬೃಹತ್ ಪ್ರತಿಭಟನೆ

Source: sonews | By Staff Correspondent | Published on 7th August 2018, 6:00 PM | Coastal News | State News | Don't Miss |

•    ಪತ್ರಿಕಾಗೋಷ್ಟಿಯಲ್ಲಿ ಮೊಗೇರ್ ಸಮಾಜದ ಮುಖಂಡ ಕೆ.ಎಂ.ಕರ್ಕಿ

ಭಟ್ಕಳ: ಪರಿಶಿಷ್ಠ ಜಾತಿಗೆ ಸೇರಿದ ಮೊಗೇರ್ ಸಮಾಜವನ್ನು  ಕಳೆದ ಒಂದು ದಶಕದಿಂದ ತಡೆಹಿಡಿಯಲಾಗಿದ್ದು ಈ ಸಮಾಜಕ್ಕೆ ಸಿಗಬೇಕಾಗಿದ್ದ ನ್ಯಾಯಯುತ ಬೇಡಿಕೆಯನ್ನು ಆಗ್ರಹಿಸಿ ಆ.13 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಭಟ್ಕಳ ತಾಲೂಕು ಮೊಗೇರ್ ಸಮಾಜದ ಅಧ್ಯಕ್ಷ ಕೆ.ಎಂ.ಕರ್ಕಿ ತಿಳಿಸಿದ್ದಾರೆ. 

ಅವರು ಸೋಮವಾರ ಇಲ್ಲಿನ ಸತ್ಕಾರ್ ಹೊಟೇಲ್ ನಲ್ಲಿ ಪತ್ರಿಕಾಗೋಷ್ಟಿಯನ್ನು ನಡೆಸಿದ್ದು ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಲಾಗುವುದು ಎಂದರು. 

ಮೊಗೇರ್ ಸಮಾಜಕ್ಕೆ ಪ.ಜಾ ಪ್ರಮಾಣ ಪತ್ರ ನೀಡಿಕೆ ಸಂಬಂಧ ದೇಶದ ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದಿದೆ. ರಾಷ್ಟ್ರೀಯ ಪರಿಶಿಷ್ಠ ಜಾತಿ ಆಯೋಗದ ನಿರ್ಣಯವನ್ನು ಒತ್ತಿ ಹೇಳಲಾಗಿದ್ದು ಕರ್ನಾಟಕ ರಾಜ್ಯ ಸರ್ಕಾರದ ಮೇಲ್ಮನವಿಯನ್ನು ವಜಾಗೊಳಿಸಿದೆ. ಆದರೆ ಇಲ್ಲಿಯ ತನಕ ತೀರ್ಪನ್ನು ಅನುಷ್ಠಾನಗೊಳಿಸಲು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳು ಮೀನಾಮೀಷ ಎಣಿಸುತ್ತಿದ್ದು ಇದರಿಂದಾಗಿ ಮೊಗೇರ್ ಸಮಾಜ ಹಲವಾರು ತೊಂದರೆಗಳನ್ನು ಅನುಭವಿಸುವಂತಾಗಿದೆ ಎಂದ ಅವರು ಕಳೆದ ಕಾಂಗ್ರೇಸ್ ಸರ್ಕಾರದ ಅವಧಿಯಲ್ಲಿ  ಅಂದಿನ ಅಡ್ವಕೇಟ್ ಜನರಲ್ ಮೊಗೇರ ಸಮಾಜಕ್ಕೆ ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ ಸರ್ಕಾರಕ್ಕೆ ಅಭಿಪ್ರಾಯವನ್ನು ತಿಳಿಸಿದ್ದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾತ್ರ ಇದನ್ನು ನಿರ್ಲಕ್ಷಿಸಿ ಸಮಾಜಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಈ ನಿಟ್ಟಿನಲ್ಲಿ ಆಗಷ್ಟ್ 13 ರಂದು ತಾಲೂಕಿನ ಮೊಗೇರ್ ಸಮಾಜದ ಸುಮಾರು 5000ಕ್ಕೂ ಮಂದಿ ತಮ್ಮ ಕೆಲಸ ಕಾರ್ಯಗಳನ್ನು ಬದಿಗಿಟ್ಟು ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು. 

ಈ ಸಂದರ್ಭದಲ್ಲಿ ಭಾಸ್ಕರ್ ಮೊಗೇರ್, ಪುಂಡಲಿಕ್ ಹೆಬಳೆ, ಅಣ್ಣಪ್ಪ ಮೊಗೇರ್ ಮುಂತಾದವರು ಉಪಸ್ಥಿತರಿದ್ದರು. 
 
Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...