ಕೇರಳ ಸಂತೃಸ್ತ ನಿಧಿಗೆ ಶಮ್ಸ್ ಶಾಲಾ ವಿದ್ಯಾರ್ಥಿಗಳಿಂದ ದೇಣಿಗೆ

Source: sonews | By Staff Correspondent | Published on 19th September 2018, 7:03 PM | Coastal News | Don't Miss |

ಭಟ್ಕಳ: ಇಲ್ಲಿನ ಹೆಬಳೆ ಗ್ರಾ.ಪಂ.ವ್ಯಾಪ್ತಿಯ ತರಬಿಯತ್ ಎಜ್ಯುಕೇಶನ್ ಸೂಸೈಟಿಯ ನ್ಯೂಶಮ್ಸ್ ಸ್ಕೂಲ್ ವಿದ್ಯಾರ್ಥಿಗಳಿಂದ ಇತ್ತೀಚೆಗೆ ಕೇರಳದಲ್ಲಿ ಸಂಭವಿಸಿ ಪ್ರಾಕೃತಿಕ ಅನಾಹುತದಲ್ಲಿ ಸಂತೃಸ್ತರ ಪರಿಹಾರ ನಿಧಿಗೆ ಒಟ್ಟು ಮಾಡಿದ ಸುಮಾರು 72 ಸಾವಿರ ಚೆಕ್ ನ್ನು ಕೇರಳ ಜಮಾಅತೆ ಇಸ್ಲಾಮಿಯ ಪರಿಹಾರ ನಿಧಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಭಟ್ಕಳ ಜಮಾಅತೆ ಇಸ್ಲಾಮಿ ಹಿಂದ್ ಅಧ್ಯಕ್ಷ ಮುಜಾಹಿದ್ ಮುಸ್ತಫಾ, ಮನುಷ್ಯರ ಮೇಲೆ ಕರುಣೆ ತೋರುವುದು ವಿದ್ಯಾರ್ಥಿ ದೆಸೆಯಿಂದಲೆ ಕಲಿತುಕೊಳ್ಳಬೇಕು. ನೀವು ನೀಡಿದ ಒಂದೊಂದು ಪೈಸೆಗೆ ಅಲ್ಲಾಹನು ನಿಮಗೆ ಅದರ ಪ್ರತಿಫಲ ನೀಡುತ್ತಾನೆ. ಮನುಷ್ಯನ ಸೇವೆ ನಿಜವಾದ ಸೇವೆಯಾಗಿದ್ದು ನಮ್ಮಲ್ಲಿ ಮನುಷ್ಯರಿಗಾಗಿ ಮಿಡಿಯುವಂತಹ ಹೃದಯ ನೀಡುವಂತೆ ದೇವರಲ್ಲಿ ಬೇಡಿಕೊಳ್ಳಬೇಕು ಎಂದರು. 

ಈ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ತಲ್ಹಾ ಸಿದ್ದಿಬಾಪ, ಆಡಳಿತ ಮಂಡಳಿ ಸದಸ್ಯ ಮೌಲಾನ ಅಝೀಝುರ್ರಹ್ಮಾನ್ ರುಕ್ನುದ್ದೀನ್ ನದ್ವಿ, ಮುಖ್ಯಾದ್ಯಾಪಕ ಮುಹಮ್ಮದ್ ರಝಾ ಮಾನ್ವಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...