ಭಟ್ಕಳದ ನಿಖಿಲ ಶಾನಭಾಗ ಯುನಿವರ್ಸಿಟಿ ಬ್ಲೂ

Source: sonews | By Staff Correspondent | Published on 29th October 2018, 5:09 PM | Coastal News | Don't Miss |

ಭಟ್ಕಳ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ ವಿಶ್ವವಿದ್ಯಾಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್‍ನಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಬಿ.ಸಿ.ಎ ಕಾಲೇಜಿನ ವಿದ್ಯಾರ್ಥಿಯಾದ ಕುಮಾರ ನಿಖಿಲ ನಾಗರಾಜ ಶಾನಭಾಗ ಇವರು ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿ ಜಿಲ್ಲೆಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಭಟ್ಕಳದ ಧನಶ್ರೀ ಹಾಗೂ ಕ್ರೀಡಾಪಟು ನಾಗರಾಜ ಶಾನಭಾಗರವರ ಪುತ್ರರಾದ ಇವರು ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿವಿಧ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಯನ್ನು ಗಳಿಸಿರುತ್ತಾರೆ. ಇವರ ಸಾಧನೆಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟ್‍ನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿಗಳಿಸಲೆಂದು ಶುಭ ಹಾರೈಸಿರುತ್ತಾರೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...