ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು ಸಾಲ ಸೌಲಭ್ಯ

Source: sonews | By Staff Correspondent | Published on 5th December 2018, 12:26 AM | Coastal News |

ಭಟ್ಕಳ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು ವಾರ್ಷಿಕ ರೂ.3.00 ಲಕ್ಷದಿಂದ ರೂ.18.00 ಲಕ್ಷವರೆಗೆ ಆದಾಯವಿದ್ದ (ಸರಕಾರಿ ನೌಕರರನ್ನೊಳಗೊಂಡು) ಭಟ್ಕಳ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುವ ಮಧ್ಯಮ ವರ್ಗದವರು ಹಾಗೂ ಇತರರಿಗೆ ಸಾಲ ಸೌಲಭ್ಯ ದೊರೆಯಲಿದ್ದು ಸೌಲಭ್ಯ ಪಡೆದುಕೊಳ್ಳುವಂತೆ ಪುರಸಭಾ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ. 

ಸಾಲ ಮಂಜೂರಾತಿಯ ಅವಧಿ 20 ವರ್ಷಗಳಾಗಿದ್ದು ವಾರ್ಷಿಕ ಆದಾಯಕ್ಕನುಗುಣವಾಗಿ ಸಹಾಯಧನವುಳ್ಳ ಕಡಿಮೆ ಬಡ್ಡಿ ದರದ ಸಾಲ ಸೌಲಭ್ಯ ಪಡೆಯಬಹುದು. ವಾರ್ಷಿಕ ರೂ.3.00 ಲಕ್ಷಗಳವರೆಗೆ ಆದಾಯ ಹೊಂದಿದವರು 30 ಚ.ಮೀ. ಅಥವಾ 60 ಚ.ಮೀ. ವಿಸ್ತೀರ್ಣದ ಮನೆ ಕಟ್ಟಿಕೊಳ್ಳಲು ರೂ.6.00 ಲಕ್ಷ ಸಾಲ ಪಡೆಯಬಹುದಾಗಿದೆ. ಇದಕ್ಕೆ ಶೇ.6.5% ಬಡ್ಡಿ ರಿಯಾಯಿತಿ ನೀಡಲಾಗುತ್ತಿದೆ. ಇದರಿಂದ ಒಟ್ಟೂ ರೂ. 2.67 ಲಕ್ಷ ಬಡ್ಡಿ ಸಹಾಯಧನ ದೊರೆಯುತ್ತದೆ. ರೂ.6.01 ಲಕ್ಷದಿಂದ ರೂ. 12.00 ಲಕ್ಷವರೆಗೆ ಆದಾಯ ಹೊಂದಿದವರು 160 ಚ.ಮೀ. ವಿಸ್ತೀರ್ಣದ ಮನೆ ಕಟ್ಟಿಕೊಳ್ಳಲು ರೂ.9.00 ಲಕ್ಷ ಸಾಲ ಪಡೆಯಬಹುದಾಗಿದೆ. ಇದಕ್ಕೆ ಶೇ.4% ಬಡ್ಡಿ ರಿಯಾಯಿತಿ ನೀಡಲಾಗುತ್ತಿದೆ. ಇದರಿಂದ ಒಟ್ಟೂ ರೂ.2.35 ಲಕ್ಷ ಬಡ್ಡಿ ಸಹಾಯಧನ ದೊರೆಯುತ್ತದೆ. ರೂ.12.01 ಲಕ್ಷದಿಂದ ರೂ. 18.00 ಲಕ್ಷವರೆಗೆ ಆದಾಯ ಹೊಂದಿದವರು 200 ಚ.ಮೀ. ವಿಸ್ತೀರ್ಣದ ಮನೆ ಕಟ್ಟಿಕೊಳ್ಳಲು ರೂ.12.00 ಲಕ್ಷ ಸಾಲ ಪಡೆಯಬಹುದಾಗಿದೆ. ಇದಕ್ಕೆ ಶೇ.3% ಬಡ್ಡಿ ರಿಯಾಯಿತಿ ನೀಡಲಾಗುತ್ತಿದೆ. ಇದರಿಂದ ಒಟ್ಟೂ ರೂ.2.30 ಲಕ್ಷ ಬಡ್ಡಿ ಸಹಾಯಧನ ದೊರೆಯುತ್ತದೆ ಎಂದೂ ತಿಳಿಸಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು ಅಪೇಕ್ಷಿಸುವ ಸರಕಾರಿ ನೌಕರನ್ನೊಳಗೊಂಡು ಮಧ್ಯಮ ವರ್ಗದವರು ಹಾಗೂ ಇತರರು ಈ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದೂ ತಿಳಿಸಲಾಗಿದೆ. 
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...