ಭಟ್ಕಳ: ಪುರವರ್ಗದ ಕನ್ನಡ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘ ನ.19ರಂದು ಉದ್ಘಾಟನೆ

Source: radhakrishna | By Arshad Koppa | Published on 16th November 2017, 8:33 AM | Coastal News |

ಭಟ್ಕಳ: ಶತಮಾನೋತ್ಸವದ ಸಮೀಪವಿರುವ ತಾಲೂಕಿನ ಪುರವರ್ಗದ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸೌಲಭ್ಯಗಳ ಕಲ್ಪಿಸುವಿಕೆ ಮತ್ತು ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಅಳವಡಿಕೆ ಉದ್ದೇಶಕ್ಕಾಗಿ ಹಳೆ ವಿದ್ಯಾರ್ಥಿ ಸಂಘ ರಚಿಸಿದ್ದು ನ.19ರಂದು ಉದ್ಘಾಟನೆಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 
ಕರ್ನಾಟಕ ಉಚ್ಛನ್ಯಾಯಾಲಯದ ಹಿರಿಯ ನ್ಯಾಯವಾದಿ ಆರ್. ನಾಗೇಂದ್ರ ನಾಯ್ಕ  ಉದ್ಘಾಟಿಸುವರು.  ಅಧ್ಯಕ್ಷ ಮೃತ್ಯುಂಜಯ ಆಚಾರ್ಯರವರು ಅಧ್ಯಕ್ಷತೆ ವಹಿಸುವರು. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ ಮರಿಸ್ವಾಮಿ, ಗೊರ್ಟೆ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾದ್ಯಾಯ ರಾಘವೇಂದ್ರ ನಾಯ್ಕ, ಉದ್ಯಮಿ ಈರಪ್ಪ ಗರ್ಡೀಕರ, ಪಂಚಾಯತ ಅಭಿವೃದ್ಧಿ ಅಧಿಕಾರಿ ಕರಿಯಪ್ಪ ನಾಯ್ಕ, ಮುನ್ನವರ ಪೇಶಮಾಮ್, ಉದಯ ನಾಯ್ಕ, ಸುರೇಶ ನಾಯ್ಕ, ಮೆರಿ ರೊಡ್ರಿಗಸ್, ಮಾದೇವ ನಾಯ್ಕ ಮತ್ತಿತರ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿರುವರು ಎಂದೂ ತಿಳಿಸಲಾಗಿದೆ. 

ಅದೇ ದಿನ ಬೆಳಿಗ್ಗೆ ಹಳೆ ವಿದ್ಯಾರ್ಥಿಗಳ ಸಮ್ಮಿಲನದಲ್ಲಿ ಸಮಾಜ ಸೇವಕ ಹಾಗೂ ಸಮಿತಿಯ ಗೌರವಾಧ್ಯಕ್ಷ ಅಣ್ಣಪ್ಪ ಅಬ್ಬಿಹಿತ್ತಲ ಅವರ ಅಧ್ಯಕ್ಷತೆಯಲ್ಲಿ "ಚಿಂತನ-ಮಂಥನ" ಕಾರ್ಯಕ್ರಮ, ಸಂಜೆ ಕ್ರೀಡಾಕೂಟ, ಶಾಲಾ ವಿದ್ಯಾರ್ಥಿಗಳಿಂದ ಮನರಂಜನೆ ರಾತ್ರಿ ವಿಶ್ವದೀಪ ಕಲಾ ನಿಕೇತನ ಸಂಸ್ಥೆ ಬೆಳಕೆಯವರಿಂದ "ಡಾನ್ಸ್ ಧಮಾಕ" ಕಾರ್ಯಕ್ರಮ ನಡೆಯಲಿದೆ ಎಂದೂ ಸಂಘಟಕರು ತಿಳಿಸಿದ್ದಾರೆ. 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...