ಲೋಕಸಭಾ ಸಚಿವಾಲಯದ ಗ್ರಾಮೀಣಾಭಿವೃದ್ಧಿ ಸಂಸದೀಯ ಸ್ಥಾಯಿ ಸಮಿತಿ ಭೇಟಿ

Source: sonews | By Staff Correspondent | Published on 28th October 2018, 12:08 AM | Coastal News | State News | Don't Miss |

ಭಟ್ಕಳ: ಕೇಂದ್ರ ಸರಕಾರದ ಲೋಕಸಭಾ ಸಚಿವಾಲಯದ ಗ್ರಾಮೀಣಾಭಿವೃದ್ಧಿ ಸಂಸದೀಯ ಸ್ಥಾಯಿ ಸಮಿತಿಯು ರಾಜ್ಯದ ಕೊಡಗು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದು ಶನಿವಾರದಂದು ಉಡುಪಿಯಿಂದ ತಾಲೂಕಿಗೆ ಭೇಟಿ ನೀಡಿದ್ದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹಾಗೂ ಅಧಿಕಾರಿಗಳ ವರ್ಗ ತಾಲೂಕಿನ ಗಡಿ ಭಾಗವಾದ ಗೊರಟೆಯಲ್ಲಿ ಒಟ್ಟು 13 ವಿವಿಧ ರಾಜ್ಯದ ಲೋಕಸಭಾ ಸದಸ್ಯರನ್ನು ಸ್ವಾಗತಿಸಲಾಯಿತು.

ಬಳಿಕ ಆರ್.ಎನ್.ರೆಸಿಡೆನ್ಸಿಯಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಎನ್.ಆರ್.ಎಲ್.ಎಮ್. ಯೋಜನೆಯಡಿ ಕರ್ನಾಟಕದಲ್ಲಿ ರೂಪುಗೊಂಡಿರುವ ಕೆ.ಎಸ್.ಆರ್.ಎಲ್.ಪಿ.ಎಸ್.(ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿವೃದ್ಧಿ ಸಂಸ್ಥೆ)ಯ ಸಂಜೀವಿನಿ ಯೋಜನೆಯ ಉತ್ಪನ್ನಗಳ ವಸ್ರು ಪ್ರದರ್ಶನವನ್ನು ದೆಹಲಿಯಿಂದ ಆಗಮಿಸಿರುವ ಸಂಸದರ ಸಮಿತಿಯ ತಂಡವೂ ವೀಕ್ಷಿಸಿದ್ದು, ವಸ್ತು ಪ್ರದರ್ಶನದಲ್ಲಿ ಜಿಲ್ಲೆಯ ಶಿರಸಿ, ಮುಂಡಗೋಡ, ಭಟ್ಕಳ, ಕುಮಟಾ, ಹೊನ್ನಾವರ ಸೇರಿದಂತೆ ಒಟ್ಟು 17 ಸ್ಟಾಲ್‍ಗಳನ್ನು ನಿರ್ಮಾಣ ಮಾಡಲಾಗಿತ್ತು. ಇದರಲ್ಲಿ ಜಿಲ್ಲೆಯಲ್ಲಿ ಸಂಜೀವಿನಿ ಯೋಜನೆಯಡಿ ಪ್ರಯೋಜನ ಪಡೆದಿರುವ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನ ಮೇಳದಲ್ಲಿ ಪ್ರದರ್ಶನಕ್ಕಿಡಲಾಗಿತ್ತು. ಹಾಗೂ ಕಾರ್ಯಕ್ರಮವನ್ನು ಸಿಂಡಿಕೇಟ್ ಬ್ಯಾಂಕ್ ನಿರ್ವಹಿಸಿ ಆಯೋಜಿಸಿತ್ತು. ಬಳಿಕ ಲೋಕಸಭಾ ಸದಸ್ಯರು ಆರ್.ಎನ್.ಎಸ್. ರೆಸಿಡೆನ್ಸಿಯಲ್ಲಿ ಭೋಜನವನ್ನು ಮುಗಿಸಿ ಕುಮಟಾ ಕಡೆಗೆ ತೆರಳಿದರು. 

ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ ಮಹ್ಮದ್ ರೋಶನ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ವಿ.ಎನ್. ಹೆಗಡೆ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕಿ ಶ್ಯಾಮಲಾ ಮಹಾಲೆ, ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿ ವಿನಾಯಕ ಪಾಟೀಲ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೋಗೇರ, ಜಿ.ಪಂ. ಸದಸ್ಯೆ ಪುಷ್ಪಾ ನಾಯ್ಕ, ಸಹಾಯಕ ಆಯುಕ್ತ ಸಾಜಿದ್ ಮುಲ್ಲಾ, ತಹಸೀಲ್ದಾರ ವಿ.ಎನ್.ಬಾಡಕರ್, ಡಿವೈಎಸ್‍ಪಿ ವೆಲೆಂಟೈನ್ ಡಿಸೋಜಾ ಸೇರಿದಂತೆ ಪೊಲೀಸ ಸಿಬ್ಬಂದಿಗಳು ಇದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...