ಶಾಲಾ ಪ್ರಾರಂಭೋತ್ಸವಕ್ಕೆ ಸಿದ್ಧರಾಗುವಂತೆ ಮುಖ್ಯ ಶಿಕ್ಷಕರಿಗೆ ಕರೆ

Source: sonews | By Staff Correspondent | Published on 27th May 2018, 5:12 PM | Coastal News | Don't Miss |

ಭಟ್ಕಳ: 2018-19ನೇ ಸಾಲಿನ ಶೈಕ್ಷಣಿಕ ವರ್ಷವು ಮೇ28ರಿಂದ ಆರಂಭಗೊಳ್ಳಲಿದ್ದು ಶಾಲಾ ಪ್ರಾರಂಭೋತ್ಸವಕ್ಕೆ ಶಾಲಾ ಮುಖ್ಯಾದ್ಯಾಪಕರು, ಶಿಕ್ಷಕರು ವಿದ್ಯಾರ್ಥಿಗಳನ್ನು ಸ್ವಾಗತಿಸಲು  ಸಿದ್ಧರಾಗಬೇಕೆಂದು ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಮುಂಜಿ ಕರೆ ನೀಡಿದರು. 

ಅವರು ನ್ಯೂ ಇಂಗ್ಲಿಷ್ ಸ್ಕೂಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಭಟ್ಕಳ ತಾಲೂಕು ಪ್ರೌಢಶಾಲಾ ಮುಖ್ಯಾಧ್ಯಾಪಕರ ಸಭೆಯನ್ನುದ್ದೇಶಿಸಿ ಮಾತನಾಡಿದರು. 

ಶಾಲಾ ಪ್ರಾರಂಭೋತ್ಸವನ್ನು ಹೊಸ ಹುರುಪಿನಿಂದ ಮಾಡಬೇಕಿದ್ದು ಆರಂಭದ ಮೊದಲ ದಿನವೇ ವಿದ್ಯಾರ್ಥಿಗಳಲ್ಲಿ ಉತ್ಸಾಹವನ್ನು ತುಂಬಬೇಕು, ಇದಕ್ಕಾಗಿ ಮುಖ್ಯಾಧ್ಯಾಪಕರು ತಮ್ಮ ಹಂತದಲ್ಲಿ ಶಾಲೆಯನ್ನು ತಳಿರು ತೋರಣಗಳಿಂದ ಸುಂದರಗೊಳಿಸಬೇಕು, ಮಕ್ಕಳಿಗೆ ಸಿಹಿಯನ್ನು ಹಂಚುವುದರ ಮೂಲಕ ಸ್ವಾಗತಿಸಬೇಕೆಂದು ಕರೆ ನೀಡಿದರು. 

2018ರ ಎಸ್‍ಎಸ್‍ಎಲ್ಸಿ ಫಲಿತಾಂಶವು ಉತ್ತಮವಾಗಿದ್ದು ಈ ನಿಟ್ಟಿನಲ್ಲಿ ಶ್ರಮಿಸಿದ ವಿದ್ಯಾರ್ಥಿಗಳಿಗೆ, ಶಾಲಾ ಮುಖ್ಯಾಧ್ಯಾಪಕರಿಗೆ ಹಾಗೂ ವಿಷಯ ಶಿಕ್ಷಕರಿಗೆ ಅಭಿನಂದಿಸಿದರು. ತಾಲೂಕಿನ 5 ಶಾಲೆಗಳು ಶೇ.100 ಫಲಿತಾಂಶ ದಾಖಲಿಸಿದ್ದು ತಾಲೂಕಿಗೆ ಹೆಸರನ್ನು ತಂದಿದ್ದಾರೆ ಎಂದರು. 

ಅಕ್ಷರ ದಾಸೋಹ ಅಧಿಕಾರಿ ಶಾರದಾ ನಾಯ್ಕ ಮಾತನಾಡಿ, ಶಾಲೆಯ ಆರಂಭಕ್ಕೆ ಮೊದಲು ಅಡುಗೆ ಕೋಣಿ ಸ್ವಚ್ಚಗೊಳಿಸಿ ಪಾತ್ರೆಗಳನ್ನು ಶುಚಿಯಾಗಿಟ್ಟುಕೊಂಡು ಮೊದಲ ದಿನ ಬಂದ ಎಲ್ಲ ವಿದ್ಯಾರ್ಥಿಗಳಿಗೆ ತಪ್ಪದೆ  ಊಟವನ್ನು ನೀಡಬೇಕು. ಊಟದ ರುಚಿ ದೃಢೀಕರಣ ಮಾಡದೆ ವಿದ್ಯಾರ್ಥಿಗಳಿಗೆ ನೀಡುವಂತಿಲ್ಲ ಎಂದರು. 

ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಲಯದ ಶಿಕ್ಷಣ ಸಂಯೋಜಕ ಸುಭ್ರಹ್ಮಣ್ಯ ಪಿ. ಭಟ್ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ನ್ಯೂ ಇಂಗ್ಲಿಷ್ ಸ್ಕೂಲ್ ಮುಖ್ಯಾಧ್ಯಾಪಕ ಎಸ್.ಎಂ.ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. 
 

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...