ಫೆ.4ರಂದು ಜಾಮಿಯಾ ಇಸ್ಲಾಮಿಯಾ ದಲ್ಲಿ ‘ಕೋಮುಸೌಹಾರ್ಧ’ ಕಾರ್ಯಕ್ರಮ

Source: sonews | By Staff Correspondent | Published on 3rd February 2018, 4:16 PM | Coastal News | State News | Don't Miss |

ಭಟ್ಕಳ: ಆಲ್ ಇಂಡಿಯಾ ಮೆಸೇಜ್ ಆಫ್ ಹ್ಯೂಮ್ಯಾನಿಟಿ ಫೋರಂ ವತಿಯಿಂದ ಹೆಬಳೆ ಪಂಚಾಯತ್ ವ್ಯಾಪ್ತಿಯ ಜಾಮಿಯಾ ಇಸ್ಲಾಮಿಯಾ ಶಿಕ್ಷಣ ಸಂಸ್ಥೆಯಲ್ಲಿ ಫೆ.4ರಂದು ಬೆಳಿಗ್ಗೆ 11ಗಂಟೆಗೆ ‘ಕೋಮುಸೌಹಾರ್ಧ’ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಶಫಿ ಶಾಬಂದ್ರಿ ಹಾಗೂ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಲ್ಯಾಸ್ ನದ್ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖ್ಯಾತ ವಿದ್ವಾಂಸ ಆಲ್ ಇಂಡಿಯಾ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್ ರಾಷ್ಟ್ರೀಯ ಅಧ್ಯಕ್ಷ ಮೌಲಾನ ಮುಹಮ್ಮದ್ ರಾಬೆಅ ಹಸನಿ ನದ್ವಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು ಗೌರವ ಅತಿಥಿಯಾಗಿ ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ಭಾಗವಹಿಸಲಿದ್ದಾರೆ. 

ಮುಖ್ಯ ಅತಿಥಿಯಾಗಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಮಾಂಕಾಳ್ ವೈದ್ಯ ಹಾಗೂ ಕರ್ನಾಟಕದ ಮಾಜಿ ಪೊಲೀಸ್ ಮಹಾನಿರ್ದೇಶಕ ಡಾ.ಶಂಕರ್ ಬಿದ್ರಿ ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಈ ಕಾರ್ಯಕ್ರಮದಲ್ಲಿ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ‘ಸ್ವಾತಂತ್ರ್ಯ ಭಾರತದಲ್ಲಿ ಕೋಮುಸೌಹಾರ್ಧತೆಯ ಮಹತ್ವ’ ಎಂಬ ವಿಷಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣ ಕಾರ್ಯಕ್ರಮವೂ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 
 
Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...