ಕೃಷಿ ಇಲಾಖೆಯಿಂದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆರ್ಜಿ ಆಹ್ವಾನ

Source: sonews | By Staff Correspondent | Published on 27th July 2017, 9:52 PM | Coastal News | Don't Miss |

ಭಟ್ಕಳ: ಕೃಷಿ ಇಲಾಖೆಯ ಆತ್ಮ ಯೋಜನೆಯಡಿಯಲ್ಲಿ ಶ್ರೇಷ್ಟ ಕೃಷಿಕ ಪ್ರಶಸ್ತಿಯನ್ನು ನಗದು ಬಹುಮಾನದೊಂದಿಗೆ ನೀಡಲಾಗುತ್ತಿದ್ದು ಪ್ರಸಕ್ತ ಸಾಲಿನ ಪ್ರಶಸ್ತಿಗಾಗಿ ಭಟ್ಕಳ ತಾಲೂಕಿನ ರೈತರಿಂದ ಇಲಾಖೆ ಕೃಷಿಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. 
ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ (ಹಸಿರುಮನೆ, ಕೃಷಿ ಅಭಿವೃದ್ಧಿ, ಸಸ್ಯಕಾಶಿ ಇತ್ಯಾದಿ) ಕೃಷಿ ಸಂಸ್ಕರಣೆ, ಆಡು, ಕುರಿ, ಮೊಲ ಸಾಕಾಣಿಕೆ ಇತ್ಯಾದಿ ಇವುಗಳಲ್ಲಿ ಒಬ್ಬರು ಒಂದೇ  ಚಟುವಟಿಕೆಗೆ  ಅರ್ಜಿ ಸಲ್ಲಿಸಬಹುದು.  
ಅರ್ಜಿಯೊಂದಿಗೆ ಸಂಬಂಧಪಟ್ಟ ಚಟುವಟಿಕೆಗಳ ಕುರಿತು ಮಾಹಿತಿಯ ಪ್ರತಿಗಳು, ಪೋಟೋ, ಸಿ.ಡಿ., ಖರ್ಚು ವೆಚ್ಚಗಳ ಕುರಿತು ಮಾಹಿತಿ, ವರಮಾನ ಇತ್ಯಾದಿಗಳನ್ನು ತಿಳಿಸಬೇಕಾಗುವುದು. ಆಸಕ್ತ ರೈತರು ಸಹಾಯಕ ಕೃಷಿ ನಿರ್ದೇಶಕರು, ಭಟ್ಕಳ ಇವರ ಕಚೇರಿಯಲ್ಲಿ ನಿಗದಿತ ನಮೂನೆಯ ಅರ್ಜಿಯನ್ನು ಸ್ವೀಕರಿಸಿ, ಭರ್ತಿ ಮಾಡಿದ ಅರ್ಜಿಯನ್ನು ಅ.೧೯ರ ಒಳಗಾಗಿ ಸಲ್ಲಿಸಬೇಕು ಎಂದೂ ತಿಳಿಸಲಾಗಿದೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...