ಚೌಥನಿ ಕಾಳಿಕಾಂಬಾ ದೇವಸ್ಥಾನದಲ್ಲಿ ವಿಶ್ವಕರ್ಮ ಪೂಜೆ

Source: sonews | By Staff Correspondent | Published on 19th September 2017, 12:00 AM | Coastal News |

ಭಟ್ಕಳ: ಇಲ್ಲಿನ ಚೌಥನಿಯ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ವಿಶ್ವಕರ್ಮ ದಿನಾಚರಣೆಯ ಅಂಗವಾಗಿ ವಿಶ್ವಕರ್ಮ ಪೂಜೆಯನ್ನು ನೆರವೇರಿಸಲಾಯಿತು. 
ದೇವಸ್ಥಾನದಲ್ಲಿ ಕಲಶವನ್ನು ಸ್ಥಾಪಿಸಿ ವಿಶ್ವಕರ್ಮರ ಆರಾಧನೆಯನ್ನು ಧಾರ್ಮಿಕ ವಿಧಿ ವಿಧಾನಗಳ ಮೂಲಕ ನೆರವೇರಿಸಲಾಯಿತು. ವಿಶ್ವಕರ್ಮ ಪೂಜೆಯ ಅಂಗವಾಗಿ ಅನ್ನ ಸಂತರ್ಪಣೆ ಜರುಗಿತು.  ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವ ಪ್ರತಿಭೆ ಗುರುಮೂರ್ತಿ ಕುಮಟಾ ಅವರ ಕಲಾಕೃತಿಗಳ ಪ್ರದರ್ಶನ ನಡೆಯಿತು. ಎಸ್.ವಿ.ಎಸ್.ಎಂ.ಎಸ್. ಗ್ರೂಪ್‌ನವರಿಂದ ಮನೋರಂಜನಾ ಕಾರ್ಯಕ್ರಮ ಸ್ಥಳೀಯ ಕಲಾವಿದರಿಂದ  ಕಾರ್ಯಕ್ರಮ, ಜ್ಞಾನಜ್ಯೋತಿ ಸಂಸ್ಥೆಯ ವತಿಯಿಂದ ಸರಕಾರ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡುವ ಕಾರ್ಯಕ್ರಮ ಕೂಡಾ ನಡೆಯಿತು. 
ಕಾರ್ಯಕ್ರಮದಲ್ಲಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರ, ಶ್ರೀ ಕಾಳಿಕಾಂಬಾ ಭಜನಾ ಮಂಡಳಿ ಸದಸ್ಯರು, ಶ್ರೀ ಕಾಳಿಕಾಂಬಾ ಮಹಿಳಾ ಸಂಘದ ಸದಸ್ಯರು, ವಿಶ್ವಕರ್ಮ ಬ್ರಾಹ್ಮಣ ಯುವಕ ಸಂಘ, ಶ್ರೀ ಕಾಳಿಕಾಂಬಾ ನಾಟ್ಯಕಲಾ ಸಂಘ ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...