ಡಿ.22,23 ರಂದು ತರಬಿಯತ್ ಎಜ್ಯಕೇಶನ್ ಸೂಸೈಟಿ 47ನೇ ಶಾಲಾ ವಾರ್ಷಿಕ ಸಮಾರಂಭ

Source: sonews | By Staff Correspondent | Published on 20th December 2018, 5:55 PM | Coastal News | Don't Miss |

ಭಟಳ: ಇಲ್ಲಿನ ತರಬಿಯತ್ ಎಜ್ಯುಕೇಶನ್ ಸೂಸೈಟಿ ಇದರ ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ನ್ಯೂ ಶಮ್ಸ್ ಸ್ಕೂಲ್ ನ 47 ನೇ ಶಾಲಾ ವಾರ್ಷೀಕೋತ್ಸವ ಸಮಾರಂಭವು ಹೆಬಳೆ ಗ್ರಾ.ಪಂ. ವ್ಯಾಪ್ತಿಯ ಜಾಮಿಯಾಬಾದ್ ರಸ್ತೆಯ ಸೈಯ್ಯದ್ ಅಲಿ ಕ್ಯಾಂಪಸ್ ನಲ್ಲಿ ಡಿ.22 ಹಾಗೂ 23 ರಂದು ನಡೆಯಲಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. 

ಡಿ.22 ರಂದು ಬೆಳ್ಳಿಗ್ಗೆ ಫ್ಯಾನ್ಸಿ ಡ್ರೆಸ್ ಸ್ಪರ್ಧೆ ನಡೆಯಲಿದ್ದು ಬೆ.10.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಯಾಗಿ ಉತ್ತರಕನ್ನಡ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್. ಜಿ.ನಾಯಕ ಗೌರವ ಅತಿಥಿಯಾಗಿ ವಾಣಿಜೋದ್ಯಮಿ ಶಾಮ್ವೀಲ್ ಭಲ್ಲಿ ಭಾಗವಹಿಸಲಿದ್ದಾರೆ. ಈ ಸಮಾರಂಭದಲ್ಲಿ ಉತ್ತಮ ವಿದ್ಯಾರ್ಥಿಗೆ ನೀಡಲ್ಪಡುವ ‘ನಜ್ಮೆ ಇಖ್ವಾನ್’ ಚಿನ್ನದ ಪದಕವನ್ನು ಪ್ರಧಾನಿಸಲಾಗುವುದು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ಮೊಹತೆಶಮ್ ವಹಿಸಲಿದ್ದಾರೆ. ಅಂದು ರಾತ್ರಿ 8.00 ಗಂಟೆಗೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿವೆ. 

ಡಿ.23 ರಂದು ಮಹಿಳೆಯರಿಗಾಗಿ ನಡೆಯುವ ಕಾರ್ಯಕ್ರಮದಲ್ಲಿ ಖಾನೇತಾ ಘನಿ ರಾಮಪುರ್ ಮುಖ್ಯ ಅತಿಥಿಯಾಗಿ, ಫರ್ಹಾ ಬಿಲಾಲ್ ರುಕ್ನುದ್ದೀನ್ ಗೌರವ ಅತಿಥಿಯಾಗಿ ಉಪಸ್ಥಿತರಿರುವರು. ಸಭಿಹಾ ಫಾರೂಖ್ ಕೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆಯ ತಿಳಿಸಿದೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...