ಜಿಲ್ಲಾಮಟ್ಟದ ಕ್ರೀಡಾಕೂಟ: ಬೀನಾ ವೈದ್ಯ ಪಿ.ಯು.ಕಾಲೇಜ್ ವಿದ್ಯಾರ್ಥಿಗಳ ಸಾಧನೆ

Source: sonews | By Staff Correspondent | Published on 18th September 2017, 11:56 PM | Coastal News | Don't Miss |

ಭಟ್ಕಳ: ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟವು ಸಿದ್ದಾಪುರದಲ್ಲಿ ನಡೆದಿದ್ದು ಇಲ್ಲಿನ ಬೀನಾ ವೈದ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ. 
ಬಾಲಕಿಯರ ವಿಭಾಗದ ತ್ರಿವಿದ ಜಿಗಿತದಲ್ಲಿ ಶ್ವೇತಾ ನಾಯ್ಕ ಪ್ರಥಮ, ಉದ್ದ ಜಿಗಿತದಲ್ಲಿ ದ್ವಿತೀಯ, ಸಹನಾ ಮೊಗೇರ್ ಮತ್ತು ಕೀರ್ತಿ ನಾಯ್ಕ ಕ್ರಾಸ್ ಕಂಟ್ರಿಯಲ್ಲಿ ಪ್ರಥಮ, ಸಹನಾ ಮೊಗೇರ್ ಪೋಲ್ ವಾಲ್ಟ್ ನಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. 
ಬಾಲಕರ ವಿಭಾಗದಲ್ಲಿ ಹ್ಯಾಮರ್ ಥ್ರೋ ಶೈಜಾದ ಪ್ರಥಮ, ಫರ್ಧಿನ್ ಚಕ್ರ ಎಸೆತದಲ್ಲಿ ತೃತೀಯ,  ಪೋಲ್ ವಾಲ್ಟ್ ವಿಭಾಗದಲ್ಲಿ ರೈಯ್ಯಾನ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ಸ್ಪರ್ಧಾಳುಗಳನ್ನು ಆಡಳಿತ ಮಂಡಳಿಯ ಅಧ್ಯಕ್ಷ ಮಂಕಾಳ ಎಸ್. ವೈದ್ಯ, ನಿರ್ದೇಶಕಿ ಪುಷ್ಪಲತಾ ಎಮ್.ಎಸ್, ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಮಹಾಲೆ, ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಪ್ಪ ನಾಯ್ಕ ಹಾಗೂ ಉಪನ್ಯಾಸಕ ವೃಂದ ಅಭಿನಂದಿಸಿದೆ. 
 

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...