ಕನ್ನಡ ಭಾಷೆಯಿಂದ ಸಾಮಾರಸ್ಯ ಸಾಧ್ಯ-ಮಡಿವಾಳ

Source: sonews | By Staff Correspondent | Published on 20th July 2017, 10:28 PM | Coastal News | Don't Miss |

ಭಟ್ಕಳ: ಕನ್ನಡ ಭಾಷೆ ಕಲಿಯುವುದರಿಂದಾಗಿ ವಿದ್ಯಾರ್ಥಿಗಳಲ್ಲಿ ಸಮಾರಸ್ಯ ಮೂಡಿ ಸಮಾಜದಲ್ಲಿ ಶಾಂತಿ ಸೌಹಾರ್ಧತೆಯ ವಾತವರಣ ನಿರ್ಮಾಣವಾಗುತ್ತದೆ ಎಂದು ಭಟ್ಕಳ ತಾಲೂಕು ಮಾಧ್ಯಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಬಿ.ಮಡಿವಾಳ ಹೇಳಿದರು. 
ಅವರು ಗುರುವಾರ ಇಲ್ಲಿನ ಹೆಬಳೆ ಗ್ರಾ.ಪಂ ವ್ಯಾಪ್ತಿಯ ಜಾಮಿಯಾಬಾದ್ ರಸ್ತೆಯಲ್ಲಿರುವ ನ್ಯೂಶಮ್ಸ್ ಸ್ಕೂಲ್ ಸಭಾಭವನದಲ್ಲಿ ನಡೆದ ಕನ್ನಡ ದ್ವಿತೀಯ ಹಾಗೂ ತೃತೀಯಾ ಭಾಷಾ ಶಿಕ್ಷಕರ ಕಾರ್ಯಾಗಾರದ ಅಧ್ಯಕ್ಷತೆವಹಿಸಿ ಮಾತನಾಡಿದರು. 
ಭಟ್ಕಳ ತಾಲೂಕಿನಲ್ಲಿ ೨೦೧೬-೧೭ರ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಕಡಿಯಾಗಲು ದ್ವಿತೀಯಾ ಹಾಗೂ ತೃತೀಯಾ ಭಾಷೆ ಕನ್ನಡ ಪತ್ರಿಕೆಯಲ್ಲಿ ಬಹಳಷ್ಟು ವಿದ್ಯಾರ್ಥಿಗಳು ಅನುತ್ತೀರ್ಣರಾಗಿವುದು ಒಂದು ಕಾರಣವಾಗಿದ್ದು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಇಂತಹ ತಪ್ಪುಗಳು ಮರುಕಳಿಸದಂತೆ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಬೋಧನೆ ಮಾಡಬೇಕಾಗಿದೆ ಎಂದ ಅವರು, ಇದಕ್ಕಾಗಿ ಶಿಕ್ಷಕರು ಮಹತ್ತರ ಪಾತ್ರ ವಹಿಸಬೇಕು ಎಂದರು. 
ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಶಮ್ಸ್ ಶಾಲೆಯ ಕಾರ್ಯದರ್ಶಿ ತಲ್ಹಾ ಸಿದ್ದಿಬಾಪ, ಗತಿಸಿದ ದಿನಗಳಿಗಿಂತ ಮುಂಬರುವ ದಿನಗಳು ಉತ್ತಮವಾಗಿರುತ್ತವೆ. ಆಗಿದ್ದು ಆಗಿ ಹೋಯಿತು ಮುಂದಿನ ದಿನಗಳಲ್ಲಿ ಕನ್ನಡ ವಿಷಯ ಸೇರಿದಂತೆ ಎಲ್ಲ ವಿಷಯಗಳಲ್ಲಿ ವಿದ್ಯಾರ್ಥಿಗಳನ್ನು ಸಿದ್ದಗೊಳಿಸುವುದರ ಮೂಲಕ ನಮ್ಮ ತಾಲೂಕಿನಲ್ಲಿ ಶೇ.೧೦೦ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಸಿದ್ದಗೊಳಿಸಲು ಸಲಹೆ ನೀಡಿದರು. 
ಪ್ರಸ್ತಾವಿಕವಾಗಿ ಮಾತನಾಡಿದ ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಎಂ.ಆರ್.ಮಾನ್ವಿ, ಕನ್ನಡ ಅತ್ಯಂತ ಸರಳ ವಿಷಯವಾಗಿದ್ದು ಇದನ್ನು ಕಲಿಸುವ ಪ್ರಾಮಾಣಿಕ ಪ್ರಯತ್ನವನ್ನು ನಾವು ಮಾಡಿದ್ದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವುದು ಎಂದ ಅವರು ನಮ್ಮಲ್ಲಿನ ವಿದ್ಯಾರ್ಥಿಗಳು ಕೇವಲ ಪರೀಕ್ಷಾ ದೃಷ್ಟಿಯಿಂದ ಮಾತ್ರ ಕನ್ನಡವನ್ನು ಅಧ್ಯಯನ ಮಾಡುತ್ತಾರೆ ಆದರೆ ಇದು ನಮ್ಮ ಬದುಕಿನ ಭಾಷೆಯಾಗಬೇಕು ಎಂದರು. 
ವಿದ್ಯಾರ್ಥಿಗಳಾದ ಉಸ್ಮಾನ್ ಹಾಗೂ ಬಾಸಿಲ್ ಪ್ರಾರ್ಥಿಸಿದರು. 
ಪದಾಧಿಕಾರಿಗಳ ಆಯ್ಕೆ: ಇದೇ ಸಂದರ್ಭದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷ ೨೦೧೭-೧೮ನೇ ಸಾಲಿನ ಕನ್ನಡ ತೃತೀಯ ಭಾಷೆ ಶಿಕ್ಷಕರ ಸಂಘದ ಪದಾಧಿಕಾರಿಗಳ ನೇಮಕವಾಗಿದ್ದು ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಎಂ.ಆರ್.ಮಾನ್ವಿ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಗೊಂಡರು. ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲೆಯ ಶಿಕ್ಷಕ ರಷೀದ್ ಹುಣಸೆಮರದ್ ಉಪಾಧ್ಯಕ್ಷರಾಗಿ ಹಾಗೂ ಕಾರ್ಯದರ್ಶಿಯಾಗಿ ನ್ಯಾಶನಲ್ ಪ್ರೌಢಶಾಲೆ ಮುರ್ಡೇಶ್ವರದ ಇಮ್ತಿಯಾಝ್ ಮುಲ್ಲಾ ಆಯ್ಕೆಯಾದರು. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...