ಭಟ್ಕಳ ತಾಲೂಕು 9ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಶ್ರೀಧರ ಶೇಟ್ ಆಯ್ಕೆ

Source: sonews | By Staff Correspondent | Published on 19th February 2018, 11:23 PM | Coastal News | Don't Miss |

ಭಟ್ಕಳ : ತಾಲೂಕಿನ ಚಿತ್ರಾಪುರದಲ್ಲಿ ಮಾ. 1ರಂದು ನಡೆಯಲಿರುವ ಭಟ್ಕಳ ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಕವಿ ಶ್ರೀಧರ ಶೇಟ್ ಶಿರಾಲಿ ಅವರನ್ನು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಅವರ ಸೂಚನೆಯಂತೆ ಘೋಷಿಸಲಾಗಿದೆ ಎಂದು ತಾಲೂಕು ಕ.ಸಾ.ಪ ಅಧ್ಯಕ್ಷ ಗಂಗಾಧರ ನಾಯ್ಕ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂರು ದಶಕಗಳ ಸಾಹಿತ್ಯ ಶೈಕ್ಷಣಿಕ, ಸಾಂಸ್ಕøತಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಶ್ರಿಧರ ಶೇಟರವರ ಮೂರು ಕವನ ಸಂಕಲನಗಳು ಈಗಾಗಲೇ ಪ್ರಕಟಗೊಂಡಿವೆ. ಹಸಿವು ಸಾಯುವುದಿಲ್ಲ (ಕವನಸಂಕಲನ) ಬೇಲಿಯ ಹೂಗಳು(ಮಕ್ಕಳ ಕವನ ಸಂಕಲನ) ಬೆರಳ ಸಂದಿಯಿಂದ (ಹನಿಗವಿತೆಗಳು) ಕೃತಿಗಳು ಕಾವ್ಯಾಸಕ್ತರ ಮೆಚ್ಚುಗೆಗೆ ಪಾತ್ರವಾಗಿದ್ದು ನಾಡಿನಾದ್ಯಂತ ಜನಪ್ರಿಯವಾಗಿವೆ. ನಾಡಿನ ಹಿರಿಯ ಸಾಹಿತಿ ಚಂಪಾ ಅವರ ಸಂಕ್ರಮಣ ಪ್ರಕಾಶನದಿಂದ ರಾಜ್ಯಮಟ್ಟದ ಸಂಕ್ರಮಣ ಕಾವ್ಯ ಪ್ರಶಸ್ತಿಗೆ ಎರಡು ಬಾರಿ ಭಾಜನರಾಗಿದ್ದಾರೆ.ಪ್ರೌಢಶಾಲಾ ಹಂತದಿಂದಲೇ ಬರವಣಿಗೆ ಆರಂಭಿಸಿದ ಶ್ರಿಧರ ಶೇಟ್ ರವರ ಅಸಂಖ್ಯ ಚುಟುಕುಗಳು,ಹನಿಗವಿತೆ,ಕಥೆಗಳನ್ನು ರಚಿಸಿದ್ದಾರೆ.ವ್ಯಂಗ್ಯಚಿತ್ರಕಾರರೂ ಆಗಿರುವ ಶ್ರೀಧರ ಶೇಟ್ ಉತ್ತಮ ಕಾರ್ಯಕ್ರಮ ನಿರೂಪಕರಾಗಿಯೂ ಗುರುತಿಸಿಕೊಂಡಿದ್ದಾರೆ. ಸಾಹಿತ್ಯ ಕ್ಷೇತ್ರದ ಸಾಧನೆಗ ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕøತರಾಗಿರುವ ಇವರಿಗೆ ತಾಲೂಕಾ ರಾಜ್ಯೋತ್ಸವ ಪ್ರಶಸ್ತಿ,ಉತ್ತಮ ಶಿಕ್ಷಕ ಪ್ರಶಸ್ತಿ, ಉತ್ತಮ ಕಾರ್ಯಕ್ರಮ ನಿರೂಪಕ ಪ್ರಶಸ್ತಿಗಳ ಜೊತೆಗೆ ಅನೇಕ ಸಂಘ ಸಂಸ್ಥೆಗಳು ಸನ್ಮಾನಿಸಿ ಗೌರವಿಸಿದೆ.

ಕಾಲೇಜು ದಿನಗಳಿಂದಲೇ ಸಾಹಿತ್ಯಿಕ ಸಾಂಸ್ಕøತಿಕ ಸಂಘಟನೆಯಲ್ಲಿ ತೊಡಗಿಸಿಕೊಂಡ ಶ್ರೀಯುತರು ಕನ್ನಡ ವಿಚಾರ ವೇದಿಕೆಯ ಕಾರ್ಯದರ್ಶಿಯಾಗಿ,ಸಾಃಇತ್ಯ ಪರಿಷತತಿನ ಕಾರ್ಯದರ್ಶಿಯಾಗಿ, ಕೋಶಾಧ್ಯಕ್ಷರಾಗಿ, ಹಣತೆ ಸಾಹಿತ್ಯಸಾಂಸ್ಕøತಿಕ ಜಗಲಿಯ ಅಧ್ಯಕ್ಷರಾಗಿ,ಶಿಕ್ಷಕ ಸಂಘದ ಕಾರ್ಯದರ್ಶಿಯಾಗಿ,ಆಂಗ್ಲ ಭಾಷಾ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಸಂಘಟನೆಯಲ್ಲೂ ತೊಡಗಿಸಿಕೊಂಡಿದ್ದಾರೆ. ತಾಲೂಕಿನ ಜಾಲಿ ಸರಕಾರಿಪ್ರೌಢಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿರುವ ಇವರು ಕನ್ನಡ ಮತ್ತು ಆಂಗ್ಲ ಭಾಷಾ ಪ್ರಭುತ್ವ ಹೊಂದಿದ್ದು ಇವರ ಭಾಷಾ ಶೈಲಿ ಜನಮನ್ನಣೆ ಪಡೆದಿದೆ. ಅವರು 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಜಿಲ್ಲಾ ಕಸಾಪ ಮತ್ತು ತಾಲೂಕಾ ಕಸಾಪ ಘಟಕ ಅಭಿನಂದನೆ ಸಲ್ಲಿಸಿದೆ. 

ಮಾರ್ಚ ಒಂದನೇ ತಾರೀಖಿನಂದಿ ಶಿರಾಲಿಯ ಚಿತ್ರಾಪುರದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನವು ಶ್ರೀಧರ ಶೇಟ್ ರವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದ್ದು ಎಲ್ಲ ಕನ್ನಡದ ಮನಸುಗಳು ಆಗಮಿಸಿ ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕಾಗಿ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ತಿಳಿಸಿದ್ದಾರೆ.


 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...