ಮಾ.೨೫ರಂದು ಚೆನ್ನಪಟ್ಟಣ ಹನುಮಂತ ದೇವರ ರಥೋತ್ಸವ ಶಾಂತಿಸಭೆ

Source: sonews | By Staff Correspondent | Published on 21st March 2018, 11:52 PM | Coastal News | Don't Miss |

ಭಟ್ಕಳ: ಮಾ.25ರಂದು ನಡೆಯುವ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ರಥೋತ್ಸವದ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ವಿವಿಧ ಧರ್ಮಗಳ ಮುಖಂಡರ ಶಾಂತಿ ಸಭೆಯು ಭಟ್ಕಳ ಸಹಾಯಕ ಆಯುಕ್ತ ಮಂಜುನಾಥ ಅಧ್ಯಕ್ಷತೆಯಲ್ಲಿ ಇಲ್ಲಿನ ಪ್ರವಾಸಿಮಂದಿರದಲ್ಲಿ ನಡೆಯಿತು.
 
ಈ ಸಂದರ್ಭದಲ್ಲಿ ಮಾತನಾಡಿದ ಎಸಿ ಮಂಜುನಾಥ, ವಿವಿಧ ಧರ್ಮೀಯರ ಸೌಹಾರ್ದತೆಯಿಂದಾಗಿ ಭಟ್ಕಳ ಇಂದು ಸೂಕ್ಷ್ಮ ಪ್ರದೇಶವಾಗಿ ಉಳಿದಿಲ್ಲ. ಚೆನ್ನಪಟ್ಟಣ ರಥೋತ್ಸವವು ನಾಡಿನೆಲ್ಲೆಡೆ ಪ್ರಸಿದ್ಧಿಯನ್ನು ಪಡೆದುಕೊಂಡಿದ್ದು, ಜಾತ್ರೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ತಾಲೂಕಿನ ವಿವಿಧ ಸರಕಾರಿ ಇಲಾಖೆಯ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಹೆಚ್ಚು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದರು. ಡಿವಾಯ್‍ಎಸ್ಪಿ ವೇಲೆಂಟೈನ್ ಡಿಸೋಜಾ ಮಾತನಾಡಿ, ಭಟ್ಕಳ ರಥೋತ್ಸವದಲ್ಲಿ 20-25 ಸಾವಿರ ಜನರು ಸೇರುವ ನಿರೀಕ್ಷೆ ಇದೆ. ಸೂಕ್ತ ರಕ್ಷಣೆಯನ್ನು ಒದಗಿಸಲು ಜನರ ಸಹಕಾರ ಅತ್ಯಗತ್ಯವಾಗಿದೆ ಎಂದು ವಿವರಿಸಿದರು. ಭಟ್ಕಳ ಪುರಸಭಾ ಅಧ್ಯಕ್ಷ ಸಾದೀಕ್ ಮಟ್ಟಾ, ಆಸರಕೇರಿ ನಿಚ್ಚಲಮಕ್ಕಿ ಶ್ರೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಎಮ್.ಆರ್.ನಾಯ್ಕ, ಭಟ್ಕಳ ಮಜ್ಲಿಸೇ ಇಸ್ಲಾ ವ ತಂಜೀಮ್ ಪ್ರಧಾನ ಕಾರ್ಯದರ್ಶಿ ಆಲ್ತಾಫ್ ಖರೂರಿ, ಇನಾಯಿತುಲ್ಲಾ ಶಾಬಂದ್ರಿ, ಶ್ರೀಧರ ನಾಯ್ಕ ಆಸರಕೇರಿ, ಡಿ.ಬಿ.ನಾಯ್ಕ ಭಟ್ಕಳ ರಥೋತ್ಸವದ ಇತಿಹಾಸವನ್ನು ನೆನಪಿಸಿ, ರಥೋತ್ಸವದ ಪೂರ್ವದಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ಮಂಡಿಸಿದರು. ವೇದಿಕೆಯಲ್ಲಿ ತಹಸೀಲ್ದಾರ ವಿ.ಎನ್.ಬಾಡ್ಕರ್, ಸಿಪಿಐ ಗಣೇಶ್, ಚೆನ್ನಪಟ್ಟಣ ಶ್ರೀ ಹನುಮಂತ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಧರ ಮೊಗೇರ ಉಪಸ್ಥಿತರಿದ್ದರು.

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...