ವಂಚಿತರಿಗೆ ಸರ್ಕಾರಿ ಸೌಲಭ್ಯ ಸಿಗುವಂತಾಗಬೇಕು_ಮಾಂಕಾಳು

Source: S O News service | By Staff Correspondent | Published on 26th March 2017, 10:40 PM | Coastal News | Don't Miss |

ಭಟ್ಕಳ: ವಿವಿಧ ಯೋಜನೆಗಳಡಿ ಸರ್ಕಾರ ಬಡವರಿಗೆ ಸೌಲಭ್ಯಗಳನ್ನು ನೀಡುತ್ತದೆ. ಸೌಲಭ್ಯಗಳನ್ನು ಪಡದುಕೊಂಡವರೆ ಹಲವಾರು ಬಾರಿ ಸೌಲಭ್ಯಗಳನ್ನು ಪಡೆಯಲು ಬಯಸುತ್ತಾರೆ. ಆದರೆ ಸೌಲಭ್ಯಗಳಿಂದ ವಂಚಿತರು ಸರ್ಕಾರದ ಸೌಲಭ್ಯಗಳನ್ನು ಪಡೆಯುವಂತಾಗಬೇಕು ಎಂದು ಶಾಸಕ ಮಾಂಕಾಳ್ ವೈದ್ಯ ಹೇಳಿದರು. 
ಅವರು ಇಲ್ಲಿನ ತಾಲೂಕು ಪಂಚಾಯತ್ ಸಭಾಭವನದಲ್ಲಿ ಅತಿಕ್ರಮಣದಾರರಿಗೆ ಹಕ್ಕು ಪತ್ರ ಸೇರಿದಂತೆ ವಿವಿಧ ಇಲಾಖಾ ಯೋಜನೆಯಡಿಯಲ್ಲಿ ಮಂಜೂರಾದ ಸೌಲಭ್ಯಗಳನ್ನು  ವಿತರಿಸಿ ಮಾತನಾಡುತ್ತಿದ್ದರು. 
ಸರಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ವಿತರಿಸಲಾಗುತ್ತಿದೆ. ಕ್ಷೇತ್ರದ ಅಭಿವೃದ್ಧಿಗೆ ಈಗಾಗಲೇ ನೂರಾರು ಕೋಟಿ ರೂಪಾಯಿಗಳನ್ನು ಮಂಜೂರಿ ಮಾಡಿಸಿದ್ದು ಮುಂದಿನ ದಿನಗಳಲ್ಲಿ ಸರಕಾರದಿಂದ ಮತ್ತಷ್ಟು ಅನುದಾನ ತರಲಾಗುವುದು. ಸರಕಾರದ ಪ್ರತಿ ಇಲಾಖೆಯಲ್ಲೂ ಯಾವ ಯೋಜನೆ, ಸೌಲಭ್ಯಗಳಿವೆ ಎಂದು ತಿಳಿದು ಅದನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಲಾಗುತ್ತಿದೆ ಎಂದ ಅವರು ಸೌಲಭ್ಯ ಪಡೆದವರೇ ಮತ್ತೆ ಪಡೆಯಲು ಮುಂದಾಗಬಾರದು. ಯಾರಿಗೆ ಸೌಲಭ್ಯ ಸಿಗಲಿಲ್ಲವೋ ಅಂತವರಿಗೆ ಸರಕಾರದ ಯೋಜನೆಯ ಲಾಭ ಸಿಗುವಂತಾಗಬೇಕು. ಈಗಾಗಲೇ ಕ್ಷೇತ್ರದಲ್ಲಿ ಅನೇಕ ಅಗತ್ಯ ಕಾಮಗಾರಿಗಳನ್ನು ನಡೆಸಲಾಗಿದೆ ಎಂದರು. 
ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯೆ ಸಿಂಧು ಭಾಸ್ಕರ ನಾಯ್ಕ, ತಾ.ಪಂ. ಉಪಾಧ್ಯಕ್ಷೆ ರಾಧಾ ವೈದ್ಯ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಿ. ಟಿ. ನಾಯ್ಕ, ಜಿಲ್ಲಾ ಕೈಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ನಾಯ್ಕ ಮುಂತಾದವರಿದ್ದರು. ಸಮಾರಂಭದಲ್ಲಿ ಎಂಟು ಮಂದಿ ಮಹಿಳೆಯರಿಗೆ ಹೊಲಿಗೆ ಯಂತ್ರ, ಬಡಿಗ ವೃತ್ತಿ ಮಾಡುವವರಿಗೆ ಕಟ್ಟರ್ ಹಾಗೂ ಆರು ಮಂದಿ ಅತಿಕ್ರಮಣದಾರರಿಗೆ ಹಕ್ಕು ಪತ್ರ, ಅತಿಕ್ರಮಣ ಸ್ಥಳದಲ್ಲಿರುವ ಶಾಲೆಗಳಿಗೆ ಹಕ್ಕು ಪತ್ರ ಮತ್ತು ಅಲ್ಪಸಂಖ್ಯಾತ ಇಲಾಖೆಯ ಯೋಜನೆಯಡಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ. ೮೫ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಲಾಯಿತು.  

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...