ಆಸರಕೇರಿ ಗುರುಮಠದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ

Source: sonews | By Staff Correspondent | Published on 25th May 2017, 4:53 PM | Coastal News |

ಭಟ್ಕಳ: ಇಲ್ಲಿನ  ನಾಮಧಾರಿ ಗುರುಮಠ ಆಸರಕೇರಿಯ ಶ್ರೀ ನಿಚ್ಚಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ  ಉಜಿರೆಯ ಶ್ರೀರಾಮ ಕ್ಷೇತ್ರದ  ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ದಿವ್ಯ ಉಪಸ್ತಿತಿಯಲ್ಲಿ ಅದ್ದೂರಿಯಾಗಿ ಜರುಗಿತು.
ಆಸರಕೇರಿಯ ಕೊಲ್ಲಿಮನೆ ಕುಟುಂಬದವರಿಂದ  ಜರುಗಿದ  ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು  ಕಲ್ಯಾಣೋತ್ಸವವನು ಕಣ್ತುಂಬ ನೋಡಿ ಪುನೀತರಾದರು. ಬೆಂಗಳೂರಿನ ವೈದಿಕ ಶ್ರೀ ಲಕ್ಷ್ಮೀಪತಿ ಗೋಪಾಲಾಚಾರ್ಯರ ವೈದಿಕತೆಯಲ್ಲಿ  ಕಲ್ಯಾಣೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.  ಕಲ್ಯಾಣೋತ್ಸವದಲ್ಲಿ ನಡೆದಿದ್ದ ಭಕ್ತರನ್ನು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳು ಆಶೀರ್ವದಿಸಿ ಸ್ವಚ್ಚ ಮನಸ್ಸಿನಿಂದ  ಭಗವಂತನನ್ನು ನಿರಂತರ ಆರಾಧನೆ ಮಾಡಿದಾಗ ಭಕ್ತರ ಕಷ್ಟಗಳು ನಿವಾರಣೆಯಾಗುವುದು ಎಂದರು. ಕಲ್ಯಾಣೋತ್ಸವ ಕಾರ್ಯಕ್ರಮದ ನಂತರ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು. ಸಾವಿರಾರು ಭಕ್ತರು 
ಅನ್ನಸಂತರ್ಪನೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಶಾಸಕ ಮಂಕಾಳ ವೈದ್ಯ, ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಿ.ಬಿ.ನಾಯ್ಕ, ಪ್ರಮುಖರಾದ  ಕೆ.ಆರ್. ನಾಯ್ಕ, ಶ್ರೀಧರ ನಾಯ್ಕ, ಗೋವಿಂದ ನಾಯ್ಕ, ಎಸ್.ಎಂ. ನಾಯ್ಕ, ಕೊಲ್ಲಿಮನೆ ಕುಟುಂಬದ ಪ್ರಮುಖರಾದ ಸೋಮಯ್ಯ ನಾಯ್ಕ,ಮಾದೇವ ನಾಯ್ಕ, ಶ್ರೀಧರ ನಾಯ್ಕ, ಗುರುಧತ್ತ ನಾಯ್ಕ,  ಸೇರಿದಂತೆ ಸಾವಿರಾರು ಭಕ್ತರು ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...