ತಾಲೂಕಾಡಳಿತದಿಂದ ವಿಶ್ವಕರ್ಮ ದಿನಾಚರಣೆ

Source: sonews | By Staff Correspondent | Published on 19th September 2017, 12:03 AM | Coastal News | Don't Miss |

ಭಟ್ಕಳ: ಇಲ್ಲಿನ ತಾಲೂಕಾ ಆಡಳಿತ, ಪುರಸಭೆ, ಭಟ್ಕಳ ಹಾಗೂ ಪಟ್ಟಣ ಪಂಚಾಯತ್ ಭಟ್ಕಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಎರ್ಪಡಿಸಲಾಗಿದ್ದ ದೇವಶಿಲ್ಪಿ ಶ್ರೀ ವಿಶ್ವಕರ್ಮ ಜಯಂತಿಯನ್ನು ತಾಲೂಕಾ ಪಂಚಾಯತ್ ಉಪಾಧ್ಯಕ್ಷೆ ರಾಧಾ ವೈದ್ಯ ಉದ್ಘಾಟಿಸಿದರು. 
ನಂತರ ಮಾತನಾಡಿದ ಅವರು ವಿಶ್ವಕರ್ಮ ಸಮಾಜರು ಅತ್ಯಂತ ಕಷ್ಟ ಜೀವಿಗಳಾಗಿದ್ದು ಸರಕಾರ ಅನೇಕ ಸೌಲಭ್ಯಗಳನ್ನು ಕೊಡ ಮಾಡಿದೆ.  ಅವುಗಳನ್ನು ಸಮಾಜದ ಎಲ್ಲರೂ ಬಳಕೆ ಮಾಡಿಕೊಂಡು. ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು. 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ ವಿಭಾಗಾಧಿಕಾರಿ ಎಂ. ಎನ್. ಮಂಜುನಾಥ ವಹಿಸಿದ್ದರು. 
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ತಹಸೀಲ್ದಾರ್ ಬಿ.ಎಚ್. ಗುನಗ, ಆರ್.ಎನ್.ಎಸ್. ಪಾಲಿಟೆಕ್ನಿಕ್ ಉಪನ್ಯಾಸಕ ಸಂತೋಷ ಎಂ. ಆಚಾರ್ಯ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ನಿರ್ದೇಶಕ ದೇವಿದಾಸ ವಿ. ಆಚಾರ್ಯ, ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಸದಾನಂದ ಆಚಾರ್ಯ ಮಾತನಾಡಿದರು. 
ಸುರೇಶ ಆಚಾರ್ಯ ನಿರೂಪಿಸಿದರು. ರಾಜು ನಾಯ್ಕ ವಂದಿಸಿದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...