ಸೆಪ್ಟೆಂಬರ್ ಅಂತ್ಯಕ್ಕೆ ಬಯಲು ಶೌಚಮುಕ್ತ ಜಿಲ್ಲೆ: ಸಿ‌ಇ‌ಒ

Source: sonews | By Staff Correspondent | Published on 18th July 2017, 10:55 PM | Coastal News | Don't Miss |

ಕಾರವಾರ: ಸೆಪ್ಟೆಂಬರ್ ಅಂತ್ಯಕ್ಕೆ ಉತ್ತರ ಕನ್ನಡ ಜಿಲ್ಲೆ ಬಯಲು ಮಲ ವಿಸರ್ಜನಾ ಮುಕ್ತ ಜಿಲ್ಲೆಯಾಗಲಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದ್ದಾರೆ.

ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆ ಶೌಚಾಲಯ ನಿರ್ಮಾಣದಲ್ಲಿ ರಾಜ್ಯದಲ್ಲಿಯೇ ಅತ್ಯುತ್ತಮ ಜಿಲ್ಲೆಯಾಗಿ ಸಾಧನೆ ಮಾಡಿದ್ದು ೨೦೧೭ ಸೆಪ್ಟೆಂಬರ್ ಅಂತ್ಯಕ್ಕೆ ಜಿಲ್ಲೆಯಲ್ಲಿ ಬಾಕಿಯಿರುವ ೨೧,೦೮೦ ಶೌಚಾಲಯಗಳನ್ನು ನಿರ್ಮಿಸಿ ಬಯಲು ಮಲ ವಿಸರ್ಜನಾ ಮುಕ್ತ ಜಿಲ್ಲೆಯಾಗಿ ಘೋಷಣೆಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ೧,೨೩,೦೬೧ ಕುಟುಂಬಗಳಿಗೆ ಶೌಚಾಲಯಗಳನ್ನು ನಿರ್ಮಿಸಿಕೊಡುವ ಗುರಿ ಹೊಂದಿದ್ದು, ಈಗಾಗಲೇ ೧,೦೧,೯೮೧ ಶೌಚಾಲಯಗಳನ್ನು ನಿರ್ಮಿಸಿಕೊಡಲಾಗಿದೆ. ಪ್ರಸಕ್ತ ೨೦೧೭-೧೮ನೇ ಸಾಲಿನ ಮೊದಲ ತ್ರೈಮಾಸಿಕ ಅವಧಿಯಲ್ಲಿ ೭೨೨೭ ಶೌಚಾಲಯಗಳನ್ನು ನಿರ್ಮಿಸಿ ಈವರೆಗೆ ರಾಜ್ಯದಲ್ಲಿಯೇ ಉತ್ತಮ ಸಾಧನೆ ಮಾಡಿರುವ ಜಿಲ್ಲೆಯಾಗಿದೆ.
೨೦೧೭ ಜೂನ್ ಅಂತ್ಯಕ್ಕೆ ಜೋಯಿಡಾ ತಾಲೂಕು ಬಯಲು ಮಲ ವಿಸರ್ಜನಾ ಮುಕ್ತ ತಾಲೂಕು ಎಂದು ಘೋಷಿಸಿಲಾಗಿದೆ. ಈವರೆಗೆ ಯಲ್ಲಾಪುರ, ಹಳಿಯಾಳ, ಜೋಯಿಡಾ ತಾಲೂಕುಗಳು ಹಾಗೂ ೭೮ ಗ್ರಾಮ ಪಂಚಾಯ್ತಿಗಳನ್ನು ಬಯಲು ಮಲ ವಿಸರ್ಜನಾ ಮುಕ್ತ ಎಂದು ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

೨೦೧೭ ಅಕ್ಟೋಬರ್ ೨ರೊಳಗೆ ಜಿಲ್ಲೆಯಲ್ಲಿ ಬಯಲು ಮಲ ವಿಸರ್ಜನಾ ಮುಕ್ತ ಜಿಲ್ಲೆಯಾಗಿ ಘೋಷಿಸುವಂತೆ ಸರ್ಕಾರದಿಂದ ನಿರ್ದೇಶನವಿದ್ದು ಸೆಪ್ಟೆಂಬರ್ ವೇಳೆಗೆ ಬಾಕಿ ಇರುವ ೨೧,೦೮೦ ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಗುರಿ ಸಾಧಿಸುವ ಗುರಿ ಹೊಂದಲಾಗಿದೆ. ಸಂಬಂಧಿಸಿದಂತೆ ಫಲಾನುಭವಿಗಳಿಗೆ ಸೌಲಭ್ಯವನ್ನು ತಲುಪಿಸಲು ಗ್ರಾಮ ಪಂಚಾಯ್ತಿ, ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಸದಸ್ಯರು, ಎಲ್ಲ ಚುನಾಯಿತ ಪ್ರತಿನಿಧಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಶಾಲಾ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತಿ ತೋರುವಂತೆ ಹಾಗೂ ಜಿಲ್ಲಾ ಪಂಚಾಯ್ತಿಯ ಅಭಿಯಾನಕ್ಕೆ ಕೈಜೋಡಿಸುವಂತೆ ಅವರು ಆಶಿಸಿದ್ದಾರೆ. 
 

Read These Next

ಕಾರವಾರ: ಕುಡಿಯುವ ನೀರು ಸಮಸ್ಯೆ : ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬರುತ್ತಿರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ತಕ್ಷಣವೇ ಸಾರ್ವಜನಿಕರಿಗೆ ಕುಡಿಯುವ ನೀರು ...

ಕಾರವಾರ: ಮತದಾನ ಜಾಗೃತಿಯ ಬೆಳಕು ಎಲ್ಲೆಡೆ ಪ್ರಕಾಶಿಸಲಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಬೆಳಕು ಕತ್ತಲನ್ನು ದೂರ ಮಾಡಿ, ಎಲ್ಲೆಡೆ ಬೆಳಕು ಮೂಡಿಸುತ್ತದೆ. ಅದೇ ರೀತಿ ಮತದಾನದ ಕುರಿತ ಜಾಗೃತಿಯ ಬೆಳಕನ್ನು ಎಲ್ಲಾ ಮತದಾರರ ...