ಭಟ್ಕಳ: ಜು.೨೨ರಂದು ಮತರದಾರರ ಪಟ್ಟಿ ಪರಿಷ್ಕರಣೆ ವಿಶೇಷ ಆಂದೋಲನ

Source: sonews | By Sub Editor | Published on 17th July 2017, 11:40 PM | Coastal News | Don't Miss |

ಭಟ್ಕಳ: ಮತದಾರರ ಪಟ್ಟಿ ಪರಿಷ್ಕರಣೆ, ವರ್ಗಾವಣೆ, ಹೆಸರು ನೋಂದಣಿ, ತೆಗೆಯುವುದು ಸೇರಿದಂತೆ ಎಲ್ಲಾ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಜು.೧ರಿಂದ ಆರಂಭವಾಗಿದ್ದು ಮತದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಹಸೀಲ್ದಾರ್ ಪ್ರಕಣೆಯಲ್ಲಿ ಕೋರಿದ್ದಾರೆ. 
ಈ ಕುರಿತು ಆಯಾಯ ಮತಗಟ್ಟೆ ಅಧಿಕಾರಿಗಳು ಅರ್ಜಿಗಳನ್ನು ಸ್ವೀಕರಿಸಲಿದ್ದು ಮತದಾರರು ಮತಗಟ್ಟೆಗಳಿಗೆ ಭೇಟಿ ನೀಡಿ ಅಗತ್ಯದ ನಮೂನೆಯಲ್ಲಿ ಅರ್ಜಿ ಸಲ್ಲಿಸುವಂತೆ ಕೋರಿದ್ದಾರೆ.  ಜು.೨೨ರಂದು ವಿಶೇಷ ಆಂದೋಲನ ಆಯೋಜಿಸಲಾಗಿದ್ದು ಅಂದು ಎಲ್ಲಾ ಮತಗಟ್ಟೆಗಳಲ್ಲಿ ಬೆಳಿಗ್ಗೆ ೧೦ರಿಂದ ಸಂಜೆ ೫ ಗಂಟೆಯ ತನಕ ಅಧಿಕಾರಿಗಳು ಮತದಾರರಿಂದ ಫಾರ್ಮ ನಂ.೬,೭,೮ ಹಾಗೂ ೮ಎ ಗಳನ್ನು ಸ್ವೀಕರಿಸಲಿದ್ದು ಎಲ್ಲಾ ಮತದಾರರು ಈ ವಿಶೇಷ ಆಂದೋಲನದ ಪ್ರಯೋಜನವನ್ನು ಪಡೆಯಬೇಕು ಎಂದೂ ಕೋರಿದ್ದಾರೆ.  
ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾಗಲಿಚ್ಚಿಸುವ ೧೮-೨೧ ವರ್ಷ ವಯಸ್ಸಿನ ಯುವ ಜನತೆ ಜು.೩೧ರ ಒಳಗಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದೂ ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read These Next

ರಸ್ತೆ ಅಪಘಾತ : ಬೈಕ್ ಸವಾರ ಸಾವು

ಮುಂಡಗೋಡ : ಬೈಕ್ ಗೆ ಕಾರ ಹಾಗೂ ವೆಗೆನಾರ ವಾಹನ ಅಪಘಾತ ಪಡಿಸಿದ್ದರಿಂದ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಕಾತೂರ ಗ್ರಾಮದ ಫಾರೆಸ್ಟ ...

ಅಣಬೆ ಬೇಸಾಯದ ಕುರಿತು ತೋಟಗಾರಿಕೆ ಇಲಾಖೆ ಯಿಂದ ಸ್ತ್ರೀ ಶಕ್ತಿ ಹಾಗೂ ಸ್ವಸಹಾಯ ಮಹಿಳಾ ಸಂಘಗಳಿಗೆ ಮಾಹಿತಿ 

ಮುಂಡಗೋಡ : ಪೌಷ್ಟಿಕಾಂಶದ ಪಡೆದು ಸದೃಡರಾಗಿ  ಹಾಗೂ ಅರ್ಥಿಕವಾಗಿ ಬಲಗೊಳ್ಳಲು ಅಣಬೆ ಬೇಸಾಯಕ್ಕೆ ಒತ್ತು ನೀಡುವಂತೆ ತೋಟಗಾರಿಕಾ ...