ಭಟ್ಕಳ:ಪುರಸಭೆಯ ಮೇಲೆ ಕಲ್ಲು ತೂರಾಟ ಪ್ರಕರಣ-ಹದಿಮೂರರಲ್ಲಿ ಹನ್ನೊಂದು ಜನರಿಗೆ ಜಾಮೀನು

Source: so english | By Arshad Koppa | Published on 22nd September 2017, 2:47 PM | Coastal News | Special Report |

ಭಟ್ಕಳ: ಸೆ. 14 ರಂದು ಪುರಸಭೆ ಎದುರು ನಡೆದ ಪ್ರತಿಭಟನೆಯಲ್ಲಿ ಪುರಸಭೆ ಕಟ್ಟಡದ ಮೇಲೆ ಕಲ್ಲು ತೂರಾಟ ಆರೋಪದಡಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ 13 ಜನರ ಪೈಕಿ 11 ಮಂದಿಗೆ ಭಟ್ಕಳ ಜೆ.ಎಂ.ಎಫ್.ಸಿ. ನ್ಯಾಯಾಲಯ ಗುರುವಾರ ಜಾಮೀನಿನ ಮೇಲೆ ಬಿಡುಗಡೆ ಮಾಡಿ ಆದೇಶ ನೀಡಿದೆ. 
ಬಂಧಿತರಾಗಿ ಕಾರವಾರದ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಈಶ್ವರ ದುರ್ಗಪ್ಪ ನಾಯ್ಕ, ಮಾಸ್ತಪ್ಪ ದುರ್ಗಪ್ಪ ನಾಯ್ಕ, ಶಂಕರ ವಿ. ನಾಯ್ಕ, ರಾಜೇಶ ನಾಗಪ್ಪ ನಾಯ್ಕ, ದಯಾನಂದ ಮಾದೇವ ನಾಯ್ಕ, ಪುಂಡಲೀಕ ಸುಕ್ರಯ್ಯ ನಾಯ್ಕ, ಜನಾರ್ಧನ ವೆಂಕಟರಮಣ ನಾಯ್ಕ, ರಾಜು ಸುಕ್ರ ನಾಯ್ಕ ಹಾಗೂ ಗಣಪತಿ ನಾರಾಯಣ ನಾಯ್ಕ,  ಮಂಜುನಾಥ ದುರ್ಗಪ್ಪ ನಾಯ್ಕ, ಆನಂದ ನಾಯ್ಕ ಎನ್ನುವವರಿಗೆ ಜಾಮೀನು ದೊರೆತಿದೆ. ಇವರ ಜೊತೆಯಲ್ಲಿಯೇ ಬಂಧಿತರಾಗಿದ್ದ ಬಿಜೆಪಿ ಪ್ರಮುಖರಾದ ಗೋವಿಂದ ಜಟ್ಟಪ್ಪ ನಾಯ್ಕ ಮತ್ತು ಕೃಷ್ಣಾ ನಾಗಪ್ಪ ನಾಯ್ಕ ಆಸರಕೇರಿ ಇವರಿಬ್ಬರಿಗೂ ಜಾಮೀನು ದೊರೆತಿಲ್ಲ ಎನ್ನಲಾಗಿದೆ.

ಮತ್ತಿಬ್ಬರ ಬಂಧನ: ಸೆ. 14 ರಂದು ಪುರಸಭೆ ಎದುರು ನಡೆದ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಮತ್ತೆ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಚೌತನಿಯ ಶಂಕರ ಸಂಕಪ್ಪ ನಾಯ್ಕ ಹಾಗೂ ದೇವೇಂದ್ರ ನಾಯ್ಕ ಎನ್ನುವವರೇ ಬಂಧಿಸಲ್ಪಟ್ಟವರಾಗಿದ್ದಾರೆ. ಇವರನ್ನು ಪೊಲೀಸರು ಭಟ್ಕಳ ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದ್ದು ಇಬ್ಬರನ್ನೂ ಕಾರವಾರದ ಕಾರಾಗೃಹಕ್ಕೆ ಕಳುಹಿಸಲಾಗಿದೆ.    

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...