ಬಿಜೆಪಿ ಯುವಮೋರ್ಚಾದಿಂದ ಮುರುಡೇಶ್ವರದಲ್ಲಿ ಕಬಡ್ಡಿ ಪಂದ್ಯಾವಳಿ

Source: S O News | By MV Bhatkal | Published on 25th May 2017, 10:02 PM | Coastal News | Don't Miss |

ಭಟ್ಕಳ: ತಾಲೂಕಿನ ಬಿಜೆಪಿ ಯುವಮೋರ್ಚಾ ವತಿಯಿಂದ ತಾಲೂಕಿನ ಮುರುಡೇಶ್ವರ ಸಿಂಡಿಕೇಟ್ ಬ್ಯಾಂಕಿನ ಎದುರಿನ ಮೈದಾನದಲ್ಲಿ ಆಯೋಜಿಸಲಾದ ಭಟ್ಕಳ ಬಿಜೆಪಿ 6 ಶಕ್ತಿ ಕೇಂದ್ರಗಳ ಕಬಡ್ಡಿ ಪಂದ್ಯಾವಳಿಯನ್ನು ಮಾಜಿ ಶಾಸಕ ಜೆ.ಡಿ.ನಾಯ್ಕ ಉದ್ಘಾಟಿಸಿದರು.
 ನಂತರ ಮಾತನಾಡಿದ ಅವರು, ಕಬಡ್ಡಿಯಲ್ಲಿ ಉತ್ಸಾಹವಿದೆ. ಕ್ರೀಡೆಯಿಂದ ಪ್ರೀತಿ ವಿಶ್ವಾಸವನ್ನು ಗಳಿಸಲು ಸಾಧ್ಯ. ಇಲ್ಲಿ ಸೋಲುಗೆಲುವು ಮುಖ್ಯವಲ್ಲ. ಆಟಗಾರರು ಕ್ರೀಡಾಸ್ಪೂರ್ತಿಯ ಮೂಲಕ ಸಂಘಟನೆಗೆ ಹೆಚ್ಚಿನ ಒತ್ತನ್ನು ನೀಡಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಟ್ಕಳ ಬಿಜೆಪಿ ಮಂಡಲದ ಅಧ್ಯಕ್ಷ ರಾಜೇಶ ನಾಯ್ಕ ಮಾತನಾಡಿ, ದೀನದಯಾಳ ಉಪಾಧ್ಯಾಯರ ಜನ್ಮದಿನವನ್ನು ವರ್ಷಪೂರ್ತಿ ಆಚರಿಸಲಾಗುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸುವ ಮೂಲಕ ಕಾರ್ಯಕರ್ತರಲ್ಲಿ ಒಗ್ಗಟ್ಟನ್ನು ಮೂಡಿಸಲಾಗುತ್ತಿದೆ ಎಂದರು. ವೇದಿಕೆಯಲ್ಲಿ ಪರಮೇಶ್ವರ ದೇವಡಿಗ, ವಿನೋದ ನಾಯ್ಕ ರಾಯಲ್ಕೇರಿ, ನಾರಾಯಣ ನಾಯ್ಕ, ಕೃಷ್ಣ ನಾಯ್ಕ ಆಸರಕೇರಿ, ದಿನೇಶ ನಾಯ್ಕ, ಸಂತೋಷ ನಾಯ್ಕ ಮುರುಡೇಶ್ವರ, ಸುಬ್ರಾಯ ದೇವಡಿಗ, ತಾಪಂ ಸದಸ್ಯ ಹನ್ಮಂತ ನಾಯ್ಕ, ಭಾಸ್ಕರ ದೈಮನೆ ಮುಂತಾದವರು ಉಪಸ್ಥಿತರಿದ್ದರು. ಭಟ್ಕಳ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಲಕ್ಷ್ಮಣ ನಾಯ್ಕ ಸ್ವಾಗತಿಸಿದರು. ಈಶ್ವರ ದೊಡ್ಮನೆ ಸಂಘದ ಗೀತೆಯನ್ನು ಹಾಡಿದರು. ಶ್ರೀಧರ ನಾಯ್ಕ ಕಾರ್ಯಕ್ರಮ ನಿರೂಪಿಸಿದ ವಂದಿಸಿದರು. ಸುನಿಲ್ ಬಿ. ನಾಯ್ಕ, ರವಿ ನಾಯ್ಕ ಜಾಲಿ ಮತ್ತಿತರರು ಪಂದ್ಯಾವಳಿಯಲ್ಲಿ ಹಾಜರಿದ್ದು, ಆಟಗಾರರನ್ನು ಹುರುದುಂಬಿಸಿದರು.
 

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...