ಭಟ್ಕಳ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಂದ್ ವಿಫಲ

Source: sonews | By sub editor | Published on 28th May 2018, 7:03 PM | Coastal News | State News | Don't Miss |

ಭಟ್ಕಳ: ರಾಜ್ಯದಲ್ಲಿ ರೈತರು ಮಾಡಿರುವ ಸಾಲವನ್ನು ಮನ್ನಾ ಮಾಡುವಂತೆ ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ನೀಡಿದ ಬಂದ್ ಕರೆ ಸಂಪೂರ್ಣವಾಗಿ ವಿಫಲಗೊಂಡಿದ್ದು ಕೇವಲ ಮನವಿ ಪತ್ರ ಸಲ್ಲಿಕೆಗೆ ಮಾತ್ರ ಸೀಮಿತಗೊಂಡಂತಾಗಿದೆ. 

ಭಟ್ಕಳ ಸೇರಿದಂತೆ ಉತ್ತರಕನ್ನಡ ಜಿಲ್ಲೆ ಹಾಗೂ ನೆರೆಯ ಉಡುಪಿ ಮತ್ತು ದ.ಕ.ಜಿಲ್ಲೆಗಳ ಸ್ಥಿತಿಯೂ ಕೂಡ ಇದೇ ಆಗಿದ್ದು ರೈತರ ಹೆಸರಿನಲ್ಲಿ ನಡೆದ ಈ ಪ್ರತಿಭಟನಾ ಸಭೆಗಳು ಕೇವಲ ಬಿಜೆಪಿ ಕಾರ್ಯಕರ್ತರು ಮಾತ್ರ ಭಾಗವಹಿಸಿದ್ದು ರೈತರಿಗೂ ಈ ಪ್ರತಿಭಟನೆಗೂ ಯಾವುದೇ ಸಂಬಂಧವಿಲ್ಲದಂತಾಗಿತ್ತು. 

ಭಟ್ಕಳದಲ್ಲಿ ನೂತನ ಬಿಜೆಪಿ ಶಾಸಕ ಸುನಿಲ್ ನಾಯ್ಕ ನೇತೃತ್ವದಲ್ಲಿ ಪ್ರವಾಸಿಬಂಗ್ಲೆಯಿಂದ ಸಹಾಯಕ ಆಯುಕ್ತರ ಕಚೇರಿ ವರೆಗೆ ಮೆರವಣೆಗೆ ನಡೆಸಿ ಮನವಿ ಪತ್ರ ಸಲ್ಲಿಸುವುದರೊಂದಿಗೆ ಮುಕ್ತಾಯಗೊಂಡಿತು. 
 

Read These Next

ಮೋದಿ ಹೆಸರಲ್ಲಿ ಮತಕೇಳದೆ ತನ್ನ ಹೆಸರಿನಲ್ಲಿ ಮತಕೇಳಲಿ ಬಂಡವಾಳ ಹೊರಬರುತ್ತದೆ : ಅಸ್ನೋಟಿಕರ

ಮುಂಡಗೋಡ : ಅನಂತಕುಮಾರ ಹೆಗಡೆ ಮೋದಿ ಹೆಸರಿನಲ್ಲಿ ಮತ ಕೇಳುವುದನ್ನು ಬಿಟ್ಟು ತನ್ನ ಹೆಸರಿನಲ್ಲಿ ಮತ ಕೇಳಲಿ ಆಗಲೇ ಈತನ ಬಂಡವಾಳ ಹೊರ ...