ಗುವಾಹಟಿ ಹೈಕೋರ್ಟ್ ಸಿಜೆಯಾಗಿ ಬೋಪಣ್ಣ ಪದೋನ್ನತಿ

Source: sonews | By Staff Correspondent | Published on 25th October 2018, 11:12 PM | State News |

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನು ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪದೋನ್ನತಿ ನೀಡಿ ಕೇಂದ್ರ ಕಾನೂನು ಸಚಿವಾಲಯ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನು ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡಲು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಕೊಲಿಜಿಯಂ ಅ.9ರಂದು ನಿರ್ಧಾರ ಕೈಗೊಂಡು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿತ್ತು. ಕೇಂದ್ರ ಸರಕಾರವು ಆ ಶಿಫಾರಸಿಗೆ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸಿದೆ.

ಎ.ಎಸ್.ಬೋಪಣ್ಣ ಅವರು 1959ರ ಮೇ 20ರಂದು ಜನಿಸಿದ್ದು, 1984ರಲ್ಲಿ ವಕೀಲಿಕೆ ಆರಂಭಿಸಿದ್ದರು. ಸಿವಿಲ್, ಸಾಂವಿಧಾನಿಕ ಮತ್ತು ಕಂಪೆನಿ ವ್ಯಾಜ್ಯ ಮತ್ತು ಸೇವಾ ವಿಷಯಗಳಲ್ಲಿ ಪರಿಣತಿ ಹೊಂದಿದ್ದಾರೆ. ಅವರ ಸೇವಾ ಅನುಭವ ಪರಿಗಣಿಸಿ 2006ರಲ್ಲಿ ಅವರನ್ನು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಗಿತ್ತು. 2007ರಲ್ಲಿ ಅವರ ಸೇವೆ ಕಾಯಂ ಮಾಡಲಾಗಿತ್ತು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...