ಅಂಕೋಲಾ ದಲ್ಲಿ ಉರುಳಿಬಿದ್ದ ಲಾರಿ; ಸ್ಥಳದಲ್ಲೆ ಕ್ಲಿನರ್ ಸಾವು;ಚಾಲಕನಿಗೆ ಗಾಯ

Source: sonews | By Staff Correspondent | Published on 3rd October 2017, 2:55 PM | Coastal News | Incidents | Don't Miss |

ಅಂಕೋಲಾ: ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಮಂಗಳವಾರ ಲಾರಿ ನೆಲಕ್ಕುರುಳಿ ಬಿದ್ದ ಪರಿಣಾಮ ಲಾರಿಯ ಕ್ಲಿನರ್ ಸ್ಥಳದಲ್ಲೇ ಸಾವನ್ನಪ್ಪಿದ್ದು ಚಾಲಕನಿಗೆ ಚಿಕ್ಕಪುಟ್ಟ  ಗಾಯಗಳಾದ ಘಟನೆ ಸುಂಕಸಾಳ್ ರಾ.ಹೆ.೫೩ರಲ್ಲಿ ಬೆಳಗಿನ ಜಾವ ಸಂಭವಿಸಿದೆ.

ಘಟನೆಯಲ್ಲಿ ಮೃತಪಟ್ಟ ಕ್ಲಿನರ್ ನನ್ನು ಧಾರವಾಡ ಜಿಲ್ಲೆಯ ಕಲಘಟಗಿ ನಿವಾಸಿ ಷರೀಫ್(೩೨) ಎಂದು ಗುರುತಿಸಲಾಗಿದೆ. ಅಪಘಾತಕ್ಕೀಡಾದ ಲಾರಿ ಕಲಘಟಗಿಯಿಂದ ಅಂಕೋಲಾಕ್ಕೆ ಪ್ರಯಾಣಿಸುತ್ತಿದ್ದು ಅಂಕೋಲಾ ಬಳಿಯ ಸುಂಕಸಾಳ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.

ನ್ಯಾಶನಲ್ ಹೈವೆ ಪೆಟ್ರೋಲಿಂಗ್ ಪೊಲೀಸ್ ಘಟನಾ ಸ್ಥಳಕ್ಕೆ ತಲುಪಿದ್ದು ಗಾಯಾಳು ಚಾಲಕನನ್ನು ಪ್ರಾಥಮಿಕ ಚಿಕಿತ್ಸೆ ನೀಡಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...