ಚನ್ನಗಿರಿ:ವಿಕಲಚೇತನರು ಬದುಕಿ ಬಾಳಲು ಸಹಕರಿಸಿ : ಶ್ರೀ ರಂಭಾಪುರಿ ಜಗದ್ಗುರುಗಳು

Source: balanagoudra | By Arshad Koppa | Published on 23rd May 2017, 3:42 PM | State News | Special Report |

ಚನ್ನಗಿರಿ - ಮೇ- 22. ಭಗವಂತನ ಸೃಷ್ಠಿ ವೈವಿಧ್ಯಮಯವಾದುದು. ವಿಕಲಚೇತನರು ದುರ್ಬಲರಲ್ಲ. ಅವರಲ್ಲಿ ಅದ್ಭುತವಾದ ಬುದ್ಧಿ ಶಕ್ತಿಯಿದೆ.  ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿದರೆ ಇನ್ನಿತರರಂತೆ ಬದುಕಿ ಬಾಳಲು ಸಾಧ್ಯವಾಗುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು.
    ಅವರು ತಾಲೂಕಿನ ತಾವೆರೆಕೆರೆ ದುರ್ವಿಗೆರೆ ಗ್ರಾಮ ಪಂಚಾಯತಿ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶಿಲಾಮಠ ಆವರಣದಲ್ಲಿ ಜರುಗಿದ ‘ವಿಕಲಚೇತನರ ಅರಿವಿನ ಸಿಂಚನ’ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
    ವಿಕಲಚೇತನರಿಗೆ ಸರಕಾರದ ಸೌಲಭ್ಯಗಳು ಬೇಕಾದಷ್ಟಿವೆ. ಗ್ರಾಮೀಣ ಭಾಗದ ವಿಕಲ ಚೇತನರಿಗೆ ಮನವರಿಕೆ ಮಾಡಿಕೊಡುವ ಅಗತ್ಯ ಬಹಳಷ್ಟಿದೆ. ಉಚಿತ ಬಸ್-ರೈಲ್ವೆ ಪಾಸ್, ಉಚಿತ ಸಾಧನ ಸಲಕರಣೆಗಳ ವಿತರಣೆ, ಶಸ್ತ್ರ ಚಿಕಿತ್ಸೆಗೆ ಸಹಾಯಧನ, ವಿಮಾ ಯೋಜನೆ, ವಿಕಲಚೇತನರಿಗೆ ಉದ್ಯೋಗ, ಸಾಲ ವಿತರಣೆ, ವೃದ್ಧಾಶ್ರಮಗಳ ಸೌಲಭ್ಯ, ಉದ್ಯೋಗದಲ್ಲಿ ಮೀಸಲಾತಿ, ಉನ್ನತ ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಶುಲ್ಕ ಮರುಪಾವತಿ, ದ್ವಿಚಕ್ರ ವಾಹನ ಇನ್ನೂ ಹಲವಾರು ಸೌಲಭ್ಯಗಳನ್ನು ಸರಕಾರ ಕೊಡುತ್ತಿರುವುದನ್ನು ಸರಿಯಾಗಿ ಬಳಸಿಕೊಂಡರೆ ವಿಕಲಚೇತನರು ಯಾರಿಗೂ ಕಡಿಮೆ ಇಲ್ಲದಂತೆ ಬಾಳಲು ಸಾಧ್ಯವಾಗುತ್ತದೆ ಎಂದರು.
    ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮಾತನಾಡಿ ಸರಕಾರದ ಸೌಲಭ್ಯಗಳನ್ನು ಪ್ರಾಮಾಣ ಕವಾಗಿ ವಿಕಲಚೇತನರಿಗೆ ತಲುಪಿಸುವ ಮಹತ್ಕಾರ್ಯವನ್ನು ಅಧಿಕಾರಿಗಳು ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.  
     ಸಮಾರಂಭದ ಅಧ್ಯಕ್ಷತೆ ವಹಿಸಿದ ಎಡೆಯೂರು ರೇಣುಕ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿದ ವೀರಶೈವ ಧರ್ಮ ಸಾಮಾಜಕ ಮೌಲ್ಯಗಳನ್ನು ಎತ್ತಿ ಹಿಡಿದು ಜನಸಾಮಾನ್ಯರ ಸಂರಕ್ಷಣೆಗೆ ಶ್ರಮಿಸಿದೆ ಎಂದರು. ನೇತೃತ್ವ ವಹಿಸಿದ ಶಿಲಾಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಮಾತನಾಡಿ ಜನಹಿತ ಕಾರ್ಯಗಳು ಸಮಾಜದಲ್ಲಿ ನಡೆಯಬೇಕು. ದೀನ ದುರ್ಬಲರಿಗೆ, ಸಂಕಷ್ಟದಲ್ಲಿದ್ದವರಿಗೆ ಮೇಲೆತ್ತುವ ಕಾರ್ಯ ಎಲ್ಲರಿಂದಲೂ ನಡೆಯಬೇಕಾಗಿದೆ ಎಂದರು. 
    ಸಮಾರಂಭದ ಉದ್ಘಾಟನೆಯನ್ನು ತಾವರೆಕೆರೆ ಜಿ.ಪಂ.ಸದಸ್ಯ ಕೆ. ಯೋಗೀಶ ನೆರವೇರಿಸಿದರು. ಬಿಳಿಕಿ ರಾಚೋಟೇಶ್ವರ ಶ್ರೀಗಳು, ಬೀರೂರು ರುದ್ರಮುನಿ ಶ್ರೀಗಳು, ಹಾರನಹಳ್ಳಿ ಶ್ರೀಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂಗಣ್ಣ ಪಾಟೀಲ ಹಾಗೂ ತಾವೆರೆಕೆರೆ ಮತ್ತು ದುರ್ವಿಗೆರೆ ಗ್ರಾ.ಪಂ. ಸದಸ್ಯರೆಲ್ಲರೂ ಪಾಲ್ಗೊಂಡಿದ್ದರು. ಸಮಾರಂಭದ ನಂತರ ಹಣ್ಣು ಮತ್ತು ತಂಪು ಪಾನೀಯ ವಿತರಣೆ ಮಾಡಲಾಯಿತು.         
 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...