ಚೆನ್ನೈ: ಜಯಲಲಿತಾ ವಿಧಿವಶ - ನೂತನ ಮುಖ್ಯಮಂತ್ರಿಯಾಗಿ ಪನ್ನೀರ್ ಸೆಲ್ವಂ ಪ್ರಮಾಣ ವಚನ ಸ್ವೀಕಾರ

Source: vijayavani | By Arshad Koppa | Published on 6th December 2016, 8:12 AM | National News | Special Report | Don't Miss |

ಚೆನ್ನೈ, ಡಿ ೫: ಕಳೆದ 75 ದಿನಗಳಿಂದ ಬಹುವಿಧ ಕಾಯಿಲೆಗಳಿಂದ ತೀವ್ರ ಅಸ್ವಸ್ಥರಾಗಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಇನ್ನಿಲ್ಲ. 

ಭಾನುವಾರ ಸಂಜೆ ಹೃದಯಘಾತಕ್ಕೊಳಗಾಗಿ ಕೃತಕ ಉಸಿರಾಟದಲ್ಲಿದ್ದ ಜಯಲಲಿತಾ ಸೋಮವಾರ ರಾತ್ರಿ 11.30ಕ್ಕೆ ವಿಧಿವಶರಾದರು. ಅದರೊಂದಿಗೆ ಹಲವು ದಶಕಗಳ ಕಾಲ ತಮಿಳುನಾಡು ಹಾಗೂ ರಾಷ್ಟ್ರ ರಾಜಕಾರಣದಲ್ಲಿ ನಿರ್ವಿವಾದ ಛಾಪು ಮೂಡಿಸಿದ್ದ ಜಯಲಲಿತಾ ಯುಗಾಂತ್ಯವಾಯಿತು. ಜಯಾ ನಿಧನ ಸುದ್ದಿ ಬಹಿರಂಗವಾಗುತ್ತಿದ್ದಂತೆಯೇ ಆಸ್ಪತ್ರೆ ಎದುರು ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳ ದುಃಖ ಕಟ್ಟೆಯೊಡೆಯಿತು. ಜಯಾ ನಿಧನದಿಂದಾಗಿ ತಮಿಳುನಾಡಿನಾದ್ಯಂತ ಸೂತಕದ ಛಾಯೆ ಆವರಿಸಿದೆ. 

ಏತನ್ಮಧ್ಯೆ ಜಯಾ ಉತ್ತರಾಧಿಕಾರಿ ಪನ್ನೀರ್ ಸೆಲ್ವಂ ಸೋಮವಾರ ತಡರಾತ್ರಿ ರಾಜಭವನದಲ್ಲಿ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಜಯಲಲಿತಾ ನಿಧನ ವಾರ್ತೆ ಪ್ರಕಟಿಸುವುದಕ್ಕೂ ಮೊದಲೇ ಆಸ್ಪತ್ರೆ ಸುತ್ತ ಮುತ್ತ 3 ಕಿ.ಮೀ ವ್ಯಾಪ್ತಿಯ ರಸ್ತೆಗಳಲ್ಲಿ ಸಿಗ್ನಲ್ ಫ್ರೀ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ನಿಧನ ಸುದ್ದಿ ಘೊಷಣೆ ನಂತರ ಕೆಲವೇ ಗಂಟೆಗಳಲ್ಲಿ ಜಯಾ ಅವರ ಪಾರ್ಥಿವ ಶರೀರವನ್ನು ಪೋಯಸ್ ಗಾರ್ಡನ್ ನಿವಾಸಕ್ಕೆ ಸ್ಥಳಾಂತರಿಸಲಾಯಿತು. ಸಾರ್ವಜನಿಕರಿಗೆ ಜಯಲಲಿತಾ ಅವರ ಅಂತಿಮ ದರ್ಶನ ಪಡೆಯಲು ಚೆನ್ನೈನ ರಾಜಾಜಿ ಹಾಲ್ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಅಂತಿಮ ದರ್ಶನದ ಬಳಿಕ ಮಂಗಳವಾರ ಸಂಜೆ ಜಯಾ ಅಂತ್ಯಸಂಸ್ಕಾರ ನಡೆಸಲು ತೀರ್ವನಿಸಿರುವುದಾಗಿ ಎಐಎಡಿಎಂಕೆ ಮೂಲಗಳು ಖಚಿತಪಡಿಸಿವೆ.

ಅಘೊಷಿತ ಬಂದ್

ರಾತ್ರಿ 11.45ಕ್ಕೆ ಎಐಎಡಿಎಂಕೆಯ ಎಲ್ಲ ಸಚಿವರು ಹಾಗೂ ನಾಯಕರು ಅಪೋಲೋ ಆಸ್ಪತ್ರೆಗೆ ದಿಢೀರ್ ಧಾವಿಸಿದರು. ಇದಕ್ಕೂ ಮೊದಲೇ ಇಡೀ ಆಸ್ಪತ್ರೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಜಯಾ ನಿಧನ ಸುದ್ದಿ ಬಹಿರಂಗಗೊಂಡ ನಂತರ ಚೆನ್ನೈನಲ್ಲಿ ಅಘೊಷಿತ ಬಂದ್ ವಾತಾವರಣ ನಿರ್ವಣವಾಗಿದ್ದು, ಪ್ರಮುಖ ಸ್ಥಳಗಳಲ್ಲಿ ಹೈ ಅಲರ್ಟ್ ಘೊಷಿಸಲಾಗಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...