ಸೆ.15ರಂದು ಆಲಿಗದ್ದ ಕಡಲತೀರದಲ್ಲಿ ಕರಾವಳಿ ಸ್ವಚ್ಛತಾ ದಿನಾಚರಣೆ

Source: sonews | By Staff Correspondent | Published on 14th September 2018, 6:35 PM | Coastal News |

ಕಾರವಾರ: ಭಾರತೀಯ ಕರಾವಳಿ ಕಾವಲು ಪಡೆಯಿಂದ ಸೆಪ್ಟೆಂಬರ್ 15ರಂದು ಶನಿವಾರ ಬೆಳಿಗ್ಗೆ 7ಕ್ಕೆ ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
    

ಕಡಲತೀರದ ಮಾಲಿನ್ಯದಿಂದ ಸಾಗರ ಜೀವಿಗಳ ಮೇಲೆ ಆಗಲಿರುವ ದುಷ್ಪರಿಣಾಮ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು ಹಾಗೂ ವಿದ್ಯಾರ್ಥಿಗಳಿಗೆ ಕರಾವಳಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಕರಾವಳಿ ಸ್ವಚ್ಛತೆ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದು ಅದರಂತೆ ಸೆ.15ರಂದು ಶನಿವಾರ ಕೂಡ ಬೆಳಿಗ್ಗೆ 7ಕ್ಕೆ ಕರಾವಳಿ ಸ್ವಚ್ಛತಾ ದಿನಾಚರಣೆ ಹಮ್ಮಿಕೊಂಡಿರುವುದಾಗಿ ಕರಾವಳಿ ಕಾವಲು ಪಡೆಯ ಸಹಾಯಕ ಕಮಾಂಡೆಂಟ್ ಸೌರಬ್ ಗಬೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    
ಈ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ, ಬಂದರು ಇಲಾಖೆ, ನಗರಸಭೆ, ಎನ್‍ಸಿಸಿ ಸೆರಿದಂತೆ ಕಾರವಾರೆದ ಎಲ್ಲ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲಿದ್ದು ಸಾರ್ವಜನಿಕರೂ ಹೆಚ್ಚಿನ ಸಂಖ್ಯೆಯಲ್ಲಿ ಸ್ವಚ್ಛತಾ ದಿನಾಚರಣೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಅವರು ಕೋರಿದ್ದಾರೆ.
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...