ಕರಾವಳಿ ಉತ್ಸವ-2018; ಮುಕ್ತ ಪ್ರೊ ಕಬಡ್ಡಿ ತಂಡಗಳ ಆಹ್ವಾನ

Source: sonews | By Staff Correspondent | Published on 23rd November 2018, 11:07 PM | Coastal News | Don't Miss |

ಕಾರವಾರ : ಕರಾವಳಿ ಉತ್ಸವ-2018 ಅಂಗವಾಗಿ ನಡೆಯುವ ಮುಕ್ತ ಪ್ರೊ ಕಬಡ್ಡಿ ಪಂದ್ಯಾವಳಿಗೆ ತಂಡಗಳನ್ನು ಆಹ್ವಾನಿಸಲಾಗಿದೆ.

ಡಿಸೆಂಬರ್ 8 ಮತ್ತು 9ರಂದು ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ನಡೆಯುವ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಇಚ್ಚಿಸುವ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳ ತಂಡಗಳು ಡಿಸೆಂಬರ್ 5, 2018ರೊಳಗೆ ಪ್ರವೇಶ ಶುಲ್ಕ ರೂ.1000 ಪಾವತಿಸಿ ನೋಂದಾಯಿಸಿಕೊಳ್ಳಬಹುದಾಗಿದೆ.

ಈ ತಂಡಗಳು ಕರ್ನಾಟಕದ ಇತರ ಜಿಲ್ಲೆಗಳ ಕ್ರೀಡಾಪಟುಗಳನ್ನು ಸೇರಿಸಿಕೊಂಡು ಪಂದ್ಯಾವಳಿಯಲ್ಲಿ ಆಡಬಹುದಾಗಿದ್ದು ಪ್ರವೇಶ ಶುಲ್ಕ ನೀಡಿ ನೋಂದಾಯಿಸಿ ಸ್ಪರ್ಧೆಯಲ್ಲಿ ಭಾಗವಹಿಸುವ ತಂಡಗಳಿಗೆ ಮಾತ್ರ ನೋಂದಣಿ ಶುಲ್ಕವನ್ನು ಮರುಪಾವತಿಸಲಾಗುವುದು.

ಪ್ರೊ ಕಬಡ್ಡಿ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು. ಅದರಂತೆ ಪ್ರಥಮ ಬಹುಮಾನ ರೂ.30,000/-, ದ್ವಿತೀಯ ಬಹುಮನ ರೂ.20,000/-, ತೃತೀಯ ಬಹುಮಾನ ರೂ.10,000/- ಹಾಗೂ ನಾಲ್ಕನೇ ಬಹುಮಾನ ರೂ.5,000/- ನೀಡಲಾಗುವುದು.

ಕಬಡ್ಡಿ ಪಂದ್ಯಾವಳಿ ನಿಯಮಾನುಸಾರ ನಡೆಸಲಾಗುವುದು. ಭಾಗವಹಿಸುವ ತಂಡಗಳು ಜಿ.ಪಿ.ನಾಯಕ ಮೊ.9448628625, ಸದಾನಂದ ಎಂ.ನಾಯಕ ಮೊ.9448014307, ಪ್ರಕಾಶ ರೇವಣಕರ ಮೊ.9880748821 ಇವರಲ್ಲಿ ತಮ್ಮ ತಂಡವನ್ನು ನೋಂದಾಯಿಸಿಕೊಳ್ಳಬಹುದು ಹಾಗೂ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಕರಾವಳಿ ಉತ್ಸವ-2018ರ ಮುಕ್ತ ಪ್ರೊ ಕಬಡ್ಡಿ ಪಂದ್ಯಾವಳಿ ಸಮಿತಿ ಪ್ರಕಟಣೆ ತಿಳಿಸಿದೆ.

ಸಿದ್ದಾಪುರದಲ್ಲಿ ಯುವ ಸೌರಭ
ಕಾರವಾರ : ನವೆಂಬರ್ 24ರಂದು ಸಿದ್ದಾಪುರದ ಕೋಲಶಿರ್ಸಿ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಯುವ ಸೌರಭ 2018 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಈಶ್ವರ ಕಲಾ ಸಂಘ ಕಡಕೇರಿ ಸಿದ್ದಾಪುರ ಇವರ ಸಂಯುಕ್ತಾಶ್ರಯದಲ್ಲಿ ನವೆಂಬರ್ 24ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಗೌರವ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಂದಾಯ, ಕೌಶಲ್ಯಾಭಿವೃದ್ಧಿ ಸಚಿವರಾದ ಆರ್.ವಿ.ದೇಶಪಾಂಡೆ ಅವರು ಉದ್ಘಾಟಿಸಲಿದ್ದಾರೆ.

ಸ್ಥಳೀಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಅವರ ಗೌರವ ಉಪಸ್ಥಿತಿ ಇರಲಿದ್ದು, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ ಸೇರಿದಂತೆ ಎಲ್ಲ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
    
 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...