ಆರ್ಯವೈಶ್ಯ ಮಹಾಮಂಡಳಿಯಿಂದ ಮುಖ್ಯಮಂತ್ರಿಗಳಿಗೆ ಅಭಿನಂದನೆ

Source: so news | By Manju Naik | Published on 7th July 2018, 7:20 PM | State News |

ಕೋಲಾರ:ಕರ್ನಾಟಕದ ಇತಿಹಾಸದಲ್ಲಿ ಪ್ರಪಥಮ ಬಾರಿಗೆ ಆರ್ಯವೈಶ್ಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಶ್ರಮಪಟ್ಟವರಲ್ಲಿ ವಿಧಾಪರಿ ಪರಿಷತ್ ಸದಸ್ಯರಾದ ಡಾ|| ಟಿ.ಎ.ಶರವಣರವರು ಪ್ರಮುಖ ಪಾತ್ರವಹಿಸಿದ್ದು, ಅವರ ಶ್ರಮದ ಫಲವಾಗಿ ಇಂದು ಆರ್ಯವೈಶ್ಯ ಜನಾಂಗಕ್ಕೆ ಉಪಕಾರವಾಗಿದೆ ಎಂದು ಕರ್ನಾಟಕ ಆರ್ಯವೈಶ್ಯ ಮಹಾಮಂಡಳಿ ಜಿಲ್ಲಾಧ್ಯಕ್ಷರಾದ ಅಮರ್‍ನಾಥ್ ತಿಳಿಸಿದರು

ನಗರದ ಕನ್ಯಕಾಪರಮೇಶ್ವರಿ ದೇವಾಲಯದಲ್ಲಿ ಆರ್ಯವೈಶ್ಯ ಸಮುದಾಯದವರು ಪೂಜೆ ಸಲ್ಲಿಸಿ ನಂತರ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಹಿಳೆಯರು, ಮಹನೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೆರವಣಿಗೆ ಮುಖಾಂತರ ಜಿಲ್ಲಾಧಿಕಾರಿಗಳ ಕಛೇರಿ ತಲುಪಿ ಪ್ರಭಾರ ಜಿಲ್ಲಾಧಿಕಾರಿ ಶುಭಕಲ್ಯಾಣ್‍ರವರ ಮುಖಾಂತರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿರವರಿಗೆ ಅಭಿನಂಧನಾ ಪತ್ರವನ್ನು ಸಲ್ಲಿಸಿದರು.

ಮುಂದಿನ ದಿನಗಳಲ್ಲಿ ಆರ್ಯವೈಶ್ಯ ಯುವ ಸಮುದಾಯಕ್ಕೆ ಮೀಸಲಾತಿ ಮುಂತಾದ ಸೌಲಭ್ಯಗಳನ್ನು ಸಹ ಕಲ್ಪಿಸಬೇಕೆಂದು ಪತ್ರದಲ್ಲಿ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ನೇತೃತ್ವ ವಹಿಸಿದ್ದ ವಿ.ಪಿ.ಮುರಳಿಧರ್, ನಾಗಣಿ, ರವಿ, ಡಿ.ಜೆ.ಮನೋಹರ್, ಎ.ಎಂ. ಶ್ರೀನಿವಾಸಮೂರ್ತಿ, ರೂಪೇಶ್ ಮತ್ತು ವಾಸವಿ ಕ್ಲಬ್‍ನ ಓಂ ಪ್ರಕಾಶ್, ವಿ.ಪಿ.ಸೋಮಶೇಖರ್,ಸಿ.ಬಿ.ಎಸ್.ಆರ್.ಗುಪ್ತ ಅಲ್ಲದೆ ಮಹಿಳಾ ವಿಭಾಗದ ಭಾನುರೇಖಾ, ಶೋಭ, ದೀಪಿಕಾಲಕ್ಷ್ಮಿ ಮುಂತಾದವರು ಭಾಗವಹಿಸಿದ್ದರು

Read These Next

ದಿನ ನಿತ್ಯದ ಅಗತ್ಯ ವಸ್ತುಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುವಂತೆ ಆಗ್ರಹಿಸಿ ರೈತಸಂಘದಿಂದ ಪ್ರತಿಭಟನೆ

ಕೋಲಾರ: ಜನ ಸಾಮಾನ್ಯರ ದಿನ ನಿತ್ಯದ ಅಗತ್ಯ ವಸ್ತುಗಳಾದ ಡೀಜಲ್, ಪೆಟ್ರೋಲ್, ಗ್ಯಾಸ್‍ನ್ನು ಜಿ.ಎಸ್.ಟಿ ವ್ಯಾಪ್ತಿಗೆ ತರಬೇಕೆಂದು ...

ಅಜರ್‍ಬೈಜಾನ್ ಜೊತೆಗಿನ ದ್ವಿಪಕ್ಷೀಯ ಸಂಬಂಧವನ್ನು ಭಾರತ ಗೌರವಿಸುತ್ತದೆ - ಮುನಿಯಪ್ಪ

ಕೋಲಾರ:  ಭಾರತ ಮತ್ತು ಅಜರ್‍ಬೈಜಾನ್ ನಮ್ಮ ಐತಿಹಾಸಿಕ ಸಂಬಂಧಗಳು ಮತ್ತು ಹಂಚಿಕೆ ಸಂಪ್ರದಾಯಗಳ ಆಧಾರದ ಮೇಲೆ ನಿಕಟ ಮತ್ತು ಸೌಹಾರ್ದಯುತ ...

ಪಟ್ಟಣದವಾಸಿಗಳೆ ಎಚ್ಚರ  ಬೀದಿಯಲ್ಲಿ ಬೌ ಬೌ ಸದ್ದು ಎಚ್ಚರ ತಪ್ಪಿದರೂ ನಾಯಿ ಕಡಿತ. ಕೈಕಟ್ಟಿ ಕುಳಿತಿರುವ ಪುರಸಭೆ ಅಧಿಕಾರಿಗಳು

ಶ್ರೀನಿವಾಸಪುರ: ಪಟ್ಟಣದವಾಸಿಗಳೆ ಎಚ್ಚರ  ಪಟ್ಟಣದ ಹಾದಿ ಬೀದಿಯಲ್ಲಿ ಈಗ ಬೌ ಬೌ ಸದ್ದು. ಸ್ವಲ್ಪ ಎಚ್ಚರ ತಪ್ಪಿದರೂ ನಾಯಿ ಕಡಿತ ...

ಗೊಂದಲ ನಿವಾರಿಸಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಹಿಜುವನಹಳ್ಳಿ ಗ್ರಾಮಸ್ಥರ ಮನವಿ

ಹಿಜುವನಹಳ್ಳಿ ಗ್ರಾಮದಲ್ಲಿ ಸುಮಾರು 130 ಮನೆಗಳು ಇದ್ದು, 600ಕ್ಕೂ ಹೆಚ್ಚು ಜನ ವಾಸಿಸುತ್ತಿದ್ದಾರೆ, ನೂರಾರು ವರ್ಷಗಳಿಂದ ಯಾರ ನಡುವೆಯೂ ...