ಆ.20ರಂದು ದಿ.ಡಿ.ದೆವರಾಜ ಅರಸು ಜಯಂತಿ

Source: sonews | By Staff Correspondent | Published on 18th August 2018, 5:33 PM | Coastal News |

ಕಾರವಾರ:ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ 103ನೇ ಜನ್ಮ ದಿನಾಚರಣೆ ಆ.20ರಂದು ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿದೆ.
    

ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆ.20 ಬೆಳಿಗ್ಗೆ 11ಗಂಟೆಗೆ ನಡೆಯಲಿರುವ ಅರಸು ಜಯಂತಿ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಗೌರವ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಕಂದಯ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ, ಜೀವನೋಪಾಯ ಸಚಿವರಾದ ಆರ್.ವಿ.ದೇಶಪಾಂಡೆ ಅವರು ಉದ್ಘಾಟಿಸಲಿದ್ದಾರೆ.
    

ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವರಾದ ಅನಂತಕುಮಾರ್ ಹೆಗಡೆ ಅವರ ಗೌರವ ಉಪಸ್ಥಿತರಿದ್ದು ಶಾಸಕಿ ರೂಪಾಲಿ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮಗೇರ, ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿವರಾಮ ಹೆಬ್ಬಾರ, ದಿನಕರ ಶೆಟ್ಟಿ, ಸುನೀಲ್ ಬಿ.ನಾಯ್ಕ್, ಎಸ್.ಎಲ್.ಘೋಟ್ನೇಕರ್, ಎಸ್.ವಿ.ಸಂಕನೂರ, ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಸಂತೋಷ ಶಂಕರ ರೇಣಕೆ, ಜಿ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಜಯಮ್ಮ ಕೃಷ್ಣ ಬೇಡ್ಕಣಿ ಮತ್ತಿತರ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
    

ಸಿದ್ದರ ಮಲ್ಲಿಕಾರ್ಜುನ ಪದವಿ ಪೂರ್ವ ಕಾಲೇಜಿನ ಜಿ.ಡಿ ಮನೋಜ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...