‘ಅಕ್ರಮ ಗಣಿಗಾರಿಕೆ ಹಾಗೂ ಭೂ ಒತ್ತುವರಿಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳನ್ನು ಜನತೆ ತಿರಸ್ಕರಿಸಬೇಕು-ಎಸ್.ಆರ್. ಹಿರೇಮಠ

Source: sonews | By Staff Correspondent | Published on 12th May 2018, 12:08 AM | State News | Don't Miss |

ಧಾರವಾಡ: ‘ಅಕ್ರಮ ಗಣಿಗಾರಿಕೆ ಹಾಗೂ ಭೂ ಒತ್ತುವರಿಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳನ್ನು ಜನತೆ ತಿರಸ್ಕರಿಸಬೇಕು. ಭ್ರಷ್ಟಾಚಾರದ ವಿರುದ್ಧ ಸಮರ ಸಾರಲು ಇದೊಂದು ದೊಡ್ಡ ಅವಕಾಶ’ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ತಿಳಿಸಿದರು.

ಅವರು ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ವಿಷಯ ತಿಳಿಸಿದರು. ‘ಚುನಾವಣೆಯಲ್ಲಿ ಯಾವುದೇ ಆಮಿಷಗಳಿಗೆ ಒಳಗಾಗದೇ ಜನರು ಮತ ಚಲಾಯಿಸಬೇಕು. ಅಕ್ರಮ ಗಣಿಗಾರಿಕೆಯಲ್ಲಿ ಗಾಲಿ ಜನರಾರ್ಧನ ರೆಡ್ಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದಾರೆ. ಇಂಥವರ ನೆರವು ಪಡೆಯಲು ಹೊರಟಿರುವ ಬಿಜೆಪಿ ನಡೆಯನ್ನು ಜನಸಂಗ್ರಾಮ ಪರಿಷತ್ ಮತ್ತು ಜನಾಂದೋಲನ ಮಹಾಮೈತ್ರಿ ಖಂಡಿಸುತ್ತದೆ’ ಎಂದರು. ‘ಬೆಂಗಳೂರಿನಲ್ಲಿ ಮತಚೀಟಿ ಸಿಕ್ಕಿರುವುದನ್ನು ಚುನಾವಣಾ ಆಯೋಗವು ಗಂಭೀರವಾಗಿ ಪರಿಗಣಿಸಿ, ಚುನಾವಣೆಯನ್ನು ಮುಂದೂಡಬೇಕು. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ರಾಷ್ಟ್ರೀಯ ಪಕ್ಷಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹೈಜಾಕ್ ಮಾಡುತ್ತಿವೆ. ಪರಸ್ಪರ ಒಬ್ಬರ ಮೇಲೆ ಒಬ್ಬರು ಆರೋಪ ಮತ್ತು ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...