ಹಿರಿಯ ವಿಮರ್ಶಕ ಗಿರಡ್ಡಿ ಗೋವಿಂದರಾಜ ಹೃದಯಾಘಾತದಿಂದ ನಿಧನ

Source: sonews | By Staff Correspondent | Published on 11th May 2018, 11:55 PM | State News | Don't Miss |

 

ಧಾರವಾಡ : ಹಿರಿಯ ವಿಮರ್ಶಕರು ಹಾಗೂ ಧಾರವಾಡ ಸಾಹಿತ್ಯ ಸಂಭ್ರಮದ ರೂವಾರಿಗಳಲ್ಲಿ ಒಬ್ಬರಾಗಿದ್ದ ಗಿರಡ್ಡಿ ಗೋವಿಂದರಾಜ(79) ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.

ಧಾರವಾಡದಲ್ಲಿ ಕಲ್ಯಾಣ ನಗರದಲ್ಲಿರುವ ಅವರ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು. ಕುಸಿದು ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ಸೇರಿಸುವಾಗ ಮಾರ್ಗಮಧ್ಯಯೇ ಸಾವನ್ನಪ್ಪಿದರು. ಅವರು ೧೯೩೯ರಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದಲ್ಲಿ ಜನಿಸಿದ ಅವರು ಅಲ್ಲಿಯೇ ಪ್ರಾಥಮಿಕ ಶಿಕ್ಷಣ ಪೂರೈಸಿ, ಪ್ರೌಢ ಶಿಕ್ಷಣ ಹಾಗೂ ಉನ್ನತ ಶಿಕ್ಷಣಕ್ಕಾಗಿ ಧಾರವಾಡಕ್ಕೆ ಆಗಮಿಸಿದ್ದರು.

ಧಾರವಾಡದ ಕರ್ನಾಟಕ ಕಾಲೇಜ್ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದಲ್ಲಿಯೇ ಶಿಕ್ಷಣ ಪಡೆದು ಅಲ್ಲಿಯೇ ಇಂಗ್ಲಿಷ್ ಪ್ರಾಧ್ಯಾಪಕರಾಗಿ, ಅನಂತರ ಮುಖ್ಯಸ್ಥರಾಗಿ ಸೇವೆಯಿಂದ ನಿವೃತ್ತಿಯಾಗಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದ ಅವರು ಐವತ್ತು ವರ್ಷಗಳ ಕಾಲ ಸಾಹಿತ್ಯ ಕೃಷಿಯಲ್ಲಿ ನಿರತರಾಗಿದ್ದರು.

ಅವರ ಅಕಾಲಿಕ ನಿಧನ ಕನ್ನಡ ಸ್ವಾರಸತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

Read These Next

ಕೊನೆಗೂ ಮೈತ್ರಿ ಸರ್ಕಾರ ಪತನ

ಬೆಂಗಳೂರು: ಕಳೆದ ೧೪ ತಿಂಗಳ ಹಿಂದೆ ರಚನೆಗೊಂಡ ಜೆ.ಡಿ.ಎಸ್. ಮತ್ತು ಕಾಂಗ್ರೇಸ್ ಮೈತ್ರಿ ಸರ್ಕಾರ ಕೊನೆಗೂ ಮಂಗಳವಾರ ಅಲ್ಪಮತಕ್ಕೆ ...

ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳ ನೇಮಕ

ಕೋಲಾರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳನ್ನು ...

ನಕಲಿ ಬಿತ್ತನೆ ಬೀಜ ಹಾಗೂ ಕೀಟ ನಾಶಕ ಕಂಪನಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ರೈತಸಂಘದಿಂದ ಮೌನ ಹೋರಾಟ

ಕೋಲಾರ: ರೈತರ ಮರಣ ಶಾಸನ ಬರೆಯುತ್ತಿರುವ ನಕಲಿ ಬಿತ್ತನೆ ಬೀಜ ಹಾಗೂ ಕೀಟ ನಾಶಕ ಕಂಪನಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ...

ಗೌನಿಪಲ್ಲಿ ಗ್ರಾಮ ಪಂಚಾಯಿತಿ ಅಧ್ಯರಾಗಿ ಕಾಂಗ್ರೆಸ್‌ನ ಶಂಕರಮ್ಮ ,ಉಪಾಧ್ಯರಾಗಿ ಮಂಜುನಾಥ ಆರಾಧ್ಯ

ಶ್ರೀನಿವಾಸಪುರ: ತಾಲ್ಲೂಕಿನ ಗೌನಿಪಲ್ಲಿ ಗ್ರಾಮ ಪಂಚಾಯಿತಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯರಾಗಿ ಕಾಂಗ್ರೆಸ್‌ನ ಶಂಕರಮ್ಮ ...

ಕೊನೆಗೂ ಮೈತ್ರಿ ಸರ್ಕಾರ ಪತನ

ಬೆಂಗಳೂರು: ಕಳೆದ ೧೪ ತಿಂಗಳ ಹಿಂದೆ ರಚನೆಗೊಂಡ ಜೆ.ಡಿ.ಎಸ್. ಮತ್ತು ಕಾಂಗ್ರೇಸ್ ಮೈತ್ರಿ ಸರ್ಕಾರ ಕೊನೆಗೂ ಮಂಗಳವಾರ ಅಲ್ಪಮತಕ್ಕೆ ...