ದ.ಕ ಜಿಲ್ಲೆಯಲ್ಲಿ ಕೋಮುಗಲಭೆಗೆ ಪ್ರಚೋದಿಸುತ್ತಿರುವ ಬಿಜೆಪಿ ಸಂಸದರ ಸದಸ್ಯತ್ವ ರದ್ದಿಗೆ ಎಸ್.ಡಿ.ಪಿ.ಐ ಆಗ್ರಹ

Source: sonews | By I.G. Bhatkali | Published on 15th July 2017, 7:58 PM | Coastal News | State News | Don't Miss |

ಭಟ್ಕಳ: ನೆರೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿಂದ ನಿರಂತರವಾಗಿ ಕೋಮುಗಲಭೆಗಳನ್ನು ಪ್ರಚೋದಿಸುತ್ತಿರುವ ಬಿಜೆಪಿ ಸಂಸದರ ಸದಸ್ಯರನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಎಸ್.ಡಿ.ಪಿ.ಐ ಪಕ್ಷದಿಂದ ಶನಿವಾರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.  
ದ.ಕ ಜಿಲ್ಲೆಯಲ್ಲಿ ನಡೆದ ಕೋಮುಗಲಭೆಯಲ್ಲಿ ಇಬ್ಬರು ಅಮಾಯಕರ ಕೊಲೆಯಾಗಿದ್ದು 12ಚೂರಿ ಇರಿತ ಪ್ರಕರಣಗಳು ನಡೆದಿರುತ್ತವೆ. ಅಲ್ಲಿ ನಿರಂತರವಾಗಿ 144 ಸೆಕ್ಷನ್ ಜಾರಿಯಲ್ಲಿದ್ದರೂ ಶರತ್ ಕುಮಾರ್ ಕೊಲೆಯನ್ನು ಖಂಡಿಸುವ ನೆಪದಲ್ಲಿ ಸಂಸದರಾದ ಶೋಭಾ ಕರಂದ್ಲಾಜೆ ಹಾಗೂ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಸಿರೋಡ್ ನಲ್ಲಿ ಸಾವಿರಾರು ಜನರನ್ನು ಸೇರಿಸಿ ಪ್ರಕ್ಷುಬ್ಧ ವಾತವರಣ ನಿರ್ಮಿಸಿದ್ದಲ್ಲದೆ ಸೂತಕದ ವಾತವರಣದಲ್ಲೂ ಕುಣಿದು ಕುಪ್ಪಳಿಸಿ ಮೃತ ಶರತ್ ರಿಗೆ ಅವಮಾನ ಮಾಡಿರುತ್ತಾರೆ. ಶರತ್ ಕೊಲೆ ಪ್ರಕರಣ ನಡೆಸುತ್ತಿರುವ ಪೊಲೀಸ್ ತನಿಖೆಗೆ ಹಾದಿ ತಪ್ಪಿಸಲು ಎಸ್.ಡಿ.ಪಿಐ ಹಾಗೂ ಪಿಎಫ್‍ಐ ಕಾರ್ಯಕರ್ತರೇ ಈ ಕೊಲೆಯನ್ನು ಮಾಡಿದ್ದಾರ ಎಂಬ ಹೇಳಿಕೆಗಳನ್ನು ನೀಡುತ್ತಿರುವ ಜಿಲ್ಲೆಯನ್ನು ಮತ್ತಷ್ಟು ಅರಾಜಕತೆಯಡೆ ಕೊಂಡೊಯುತ್ತಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ. ಜಿಲ್ಲೆಯಲ್ಲಿ ಸಂಘಪರಿವಾರದಿಂದ ನಡೆದಿರುವ ಹತ್ಯ, ಕೊಲೆ ಪ್ರಕರಣಗಳನ್ನು ನಮ್ಮ ತಲೆಗೆ ಕಟ್ಟುವಂತೆ ಪ್ರಯತ್ನ ಈ ಸಂಸದರು ಮಾಡುತ್ತಿದ್ದು ಕೂಡಲೇ ಇಂತಹ ವ್ಯಕ್ತಿಗಳ ಸಂಸತ್ ಸದಸ್ಯತ್ವರನ್ನು ರದ್ದುಗೊಳಿಸಬೇಕೆಂದು ರಾಷ್ಟ್ರಪತಿಗಳಿಗೆ ನೀಡಿದ ಮನವಿಯಲ್ಲಿ ತಿಳಿಸಲಾಗಿದೆ. 
ಕಳೆದ ನಾಲ್ಕು ವರ್ಷಗಳಲ್ಲಿ ಆತ್ಮಹತ್ಯೆ, ಸರ್ಕಾರಿ ಉದ್ಯೋಗಿಗಳ ಸಾವುಗಳೀಗೆ ಕೋಮುಬಣ್ಣ ನೀಡಿ ಸಮಾಜದಲ್ಲಿ ಅರಾಜಕತೆಯನ್ನು ಸೃಷ್ಟಿಸಲಾಗುತ್ತಿದೆ. ಸಂಘಪರಿವಾರ ಬಿಜೆಪಿ ನಿರಂತರವಾಗಿ ಜಿಲ್ಲೆಯಲ್ಲಿ ಕೋಮುದ್ವೇಷ ಹರಡುತ್ತಿದೆ. ಸೂತಕದ ಮನೆಯಲ್ಲಿ ರಾಜಕೀಯ ಮಾಡುತಿರುವ ಇವರನ್ನು ಕಾನೂನಿನಡಿ ತಂದು ಇಲ್ಲಿನ ಕೋಮುಗಲಭೆಗಳನ್ನು ಕೊನೆಗಾಣಿಸಬೇಕು. ಬಿಜೆಪಿ ಸಂಸದರು, ಶಾಸಕರು ಮತ್ತು ಸಂಘಪರಿವಾರದ ನಾಯಕರಾದ ಕಲ್ಲಡ್ಕ ಪ್ರಭಾಕರ್ ಭಟ್, ಶರಣ್ ಪಂಪವೆಲ್, ಜಗದೀಶ್ ಶೇಣವ್,ಮುರುಳೀರಾವ್ ಹಂಸತಡ್ಕ, ಸತ್ಯಜೀತ್ ಸುರತ್ಕಲ್ ಮೊದಲಾದವರ ಮೇಲೆ ಕೇಸು ದಾಖಲಿಸಬೇಕು. ಇದಕ್ಕೆ ಪ್ರಚೋದಿಸುತ್ತಿರುವ ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ಪ್ರಭಾಕರ್ ಭಟ್ ರನ್ನು ಬಂಧಿಸಿದರೆ ಇಡೀ ರಾಜ್ಯವೇ ಹೊತ್ತಿ ಉರಿಯಲಿದೆ ಎಂಬ ಪ್ರಚೋದನಕಾರಿ ಹೇಳಿಕೆ ನೀಡಿರುವ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಯಡಿಯೂರಪ್ಪರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಲು ಸೂಕ್ತಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ತಿಳಿಸಿದೆ. 
ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಭಟ್ಕಳ ತಾಲೂಕು ಅಧ್ಯಕ್ಷ ಯೂಸೂಫ್ ಮುಲ್ಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹೀರ್ ಆಹ್ಮದ್, ಭಟ್ಕಳ ತಾಲೂಕು ಪ್ರಧಾನ ಕಾರ್ಯದರ್ಶಿ ಅಝೀಮ್ ಖೂಮಿ, ಸದಸ್ಯರಾದ ನಬೀಲ್, ಸರಫ್ರಾಝ್ ಖಾನ್ ಮತ್ತಿತರರು ಹಾಜರಿದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...