ವಿಜಯಪುರ:ಗುಂಪುಗಳ ನಡುವೆ ಘರ್ಷಣೆ, ಸ್ಪೋಟಕ ಬಳಸಿ ಬೆದರಿಕೆ

Source: so news | By MV Bhatkal | Published on 17th June 2018, 7:24 PM | State News |

ವಿಜಯಪುರ: ಹಳೆಯ ವೈಷಮ್ಯದ ಕಾರಣ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಪ್ರಾಣಿ ಕೊಲ್ಲಲು ಬಳಸುವ ಸ್ಪೋಟಕ ಬಳಸಿ ಬೆದರಿಕೆ ಹಾಕಲಾಗಿದೆ. ಈ ಸಂದರ್ಭದಲ್ಲಿ ಲಾಠಿ ಪ್ರಹಾರ ನಡೆಸಿದ ಪೊಲೀಸರಿಗೆ ಲಕ್ಶಾಂತರ ರೂಪಾಯಿ ಮೌಲ್ಯದ ಕಳ್ಳಭಟ್ಟಿ ಸಾರಾಯಿ ತಯಾರಿಕೆ ಘಟಕಗಳು ಪತ್ತೆಯಾಗಿವೆ.
ಅಷ್ಟಕ್ಕೂ ಆಗಿದ್ದೇನೆಂದರೆ, ವಿಜಯಪುರ ನಗರದ ಹರಣ ಶಿಕಾರಿ ಪ್ರದೇಶದಲ್ಲಿ ನಡೆದಿದೆ. ಒಂದೇ ಸಮುದಾಯದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಪರಸ್ಪರ ಕಲ್ಲು ತೂರಾಟದಲ್ಲಿ ಹಲವರು ಗಾಯಗೊಂಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ. ಈ ಘರ್ಷಣೆಯಲ್ಲಿ ಪ್ರಾಣಿಗಳನ್ನು ಕೊಲ್ಲಲು ಬಳಸುವ ಸ್ಪೋಟಕದ ಬಳಕೆಯಾಗಿದ್ದು, ಎರಡೂ ಸಮುದಾಯದ ಜನರ ಮಧ್ಯೆ ಆರೋಪ ಪ್ರತ್ಯಾರೋಪ ನಡೆದಿದೆ.
ಈ ಮಧ್ಯೆ, ಈ ಘಟನೆಯ ಹಿಂದೆ ಚುನಾವಣೆ ಸಂದರ್ಭದಲ್ಲಿನ ರಾಜಕೀಯವೂ ಸೇರಿದೆ ಎನ್ನಲಾಗಿದೆ. ಕಳೆದ ವಿಧಾನ ಸಭೆ ಚುನಾವಣೆ ಸಂದರ್ಭದಲ್ಲಿ ಹಣದ ವ್ಯವಹಾರ ಸಂಬಂಧ ಎರಡೂ ಗುಂಪುಗಳ ನಡುವೆ ವೈರತ್ವ ಬೆಳೆದು ಇಂದು ಅದು ದೀರ್ಘಕ್ಕೆ ಹೋಗಿದೆ. ಈ ಮಧ್ಯೆ ಈ ಘಟನೆ ಸಂಬಂಧ ಪೊಲೀಸರು ಸುಮಾರು 20ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದು, ಅವರಲ್ಲಿ ಕೆಲವರು ಅಮಾಯಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಲಾಗಿದೆ.
ಈ ಮಧ್ಯೆ ಪೊಲೀಸರು ಪರಿಸ್ಥಿತಿ ನಿಭಾಯಿಸಲು ಲಾಠಿ ಪ್ರಹಾರ ನಡೆಸಿದ್ದು, ನಂತರ ಆರೋಪಿಗಳ ಬಂಧನಕ್ಕೆ ತೆರಳಿದಾಗ ಈ ಪ್ರದೇಶದ ಹತ್ತಾರು ಕಡೆಗಳಲ್ಲಿ ಕಳ್ಳಭಟ್ಟಿ ತಯಾರಿಕೆ ಘಟಕಗಳು ಪತ್ತೆಯಾಗಿವೆ. ಆಗ ಎಚ್ಚೆತ್ತುಕೊಂಡ ಪೊಲೀಸರು ಈ ಕಳ್ಳಭಟ್ಟಿ ಘಟಕಗಳನ್ನು ನಾಶ ಪಡಿಸಿದ್ದಾರೆ.
ಘಟನಾ ಸ್ಥಳದಲ್ಲಿ ವಿಜಯಪುರ ಡಿವೈಎಸ್ಪಿ ಅಶೋಕ ಹಾಗೂ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.  ಅಲ್ಲದೇ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಒಂದು ತುಕಡಿಯನ್ನು ನಿಯೋಜಿಸಲಾಗಿದೆ.ಘಟನಾ ಸ್ಥಳದಲ್ಲಿ ವಿಜಯಪುರ ಡಿವೈಎಸ್ಪಿ ಅಶೋಕ ಹಾಗೂ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.  ಅಲ್ಲದೇ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಒಂದು ತುಕಡಿಯನ್ನು ನಿಯೋಜಿಸಲಾಗಿದೆ. ಈ ಮಧ್ಯೆ ಹರಣ ಶಿಕಾರಿ ಕಾಲನಿಯಲ್ಲಿರುವ ಗಂಡಸರು ಈಗ ಕಾಲನಿಯನ್ನು ಬಿಟ್ಟು ಪಲಾಯನ ಮಾಡಿದ್ದಾರೆ.

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...