ಹೊಸ ಮತದಾರರಿಗೆ ಮನೆ ಮನೆಗೆ ತೆರಳಿ ಚುನಾವಣಾ ಗುರುತಿನ ಚೀಟಿ ವಿತರಣೆ

Source: so news | By MV Bhatkal | Published on 19th March 2019, 11:52 PM | State News | Don't Miss |

 

ಮೈಸೂರು:ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ನಗರ ಪ್ರದೇಶದ ಮೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 18 ವರ್ಷ ತುಂಬಿದವರು ಹೊಸದಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿರುವ ಯುವ ಮತದಾರರ ಮನೆ ಮನೆಗೆ ತೆರಳಿ ನಗರದ ಎಲ್ಲಾ ವಾರ್ಡ್‍ಗಳಲ್ಲಿ ಚುನಾವಣಾ ಗುರುತಿನ ಕಾರ್ಡ್ ವಿತರಿಸುಲಾಗುತ್ತಿದೆ ಎಂದು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ಶಿವಾನಂದ ಮೂರ್ತಿ ಅವರು ತಿಳಿಸಿದರು.
ಭಾನುವಾರದಿಂದ ನಗರದಲ್ಲಿ ಚುನಾವಣಾ ಗುರುತಿನ ಚೀಟಿಯನ್ನು ವಿತರಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಏಪ್ರಿಲ್ 18 ರಂದು ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡುವಂತೆ ಹೊಸ ಯುವ ಮತದಾರರಿಗೆ ಅರಿವು ಮೂಡಿಸಲಾಗುತ್ತಿದೆ ಕೃಷ್ಣರಾಜ ಕ್ಷೇತ್ರದಲ್ಲಿ 2400, ಚಾಮರಾಜ ಕ್ಷೇತ್ರದಲ್ಲಿ 1700 ಹಾಗೂ ನರಸಿಂಹ ರಾಜ ಕ್ಷೇತ್ರದಲ್ಲಿ 2468 ಹೊಸ ಯುವ ಮತದಾರರು ಚುನಾವಣಾ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಹೊಸ ಸೇರ್ಪಡೆಯಾಗಿರುವವರು ಪ್ರಥಮ ಬಾರಿಗೆ ಮತದಾನ ಮಾಡಲು ಉತ್ಸುಕರಾಗಿದ್ದಾರೆ.
ಸೆಕ್ಟರ್ ಅಧಿಕಾರಿ, ರೆವಿನ್ಯೂ ಅಧಿಕಾರಿ ಹಾಗೂ ಬೂತ್ ಮಟ್ಟದ ಅಧಿಕಾರಿಗಳು ಚುನಾವಣಾ ಗುರುತಿನ ಕಾರ್ಡ್‍ಗಳನ್ನು ವಿತರಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಈ ಪ್ರಕ್ರಿಯೆ ಹೊಸ ಯುವ ಮತದಾರರಿಗೆ ಕಾರ್ಡ್ ತಲುಪಿಸುವ ವರೆವಿಗೂ ನಡೆಯಲಿದೆ.
ಯುವ ಮತದಾರರು ಚುನಾವಣೆ ಪ್ರಕ್ರಿಯೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮ ಪ್ರಜಾಪ್ರಭುತ್ವ ಸರ್ಕಾರ ಅಸ್ಥಿತ್ವಕ್ಕೆ ಬರಲು ಕಡ್ಡಾಯವಾಗಿ ಮತದಾನ ಮಾಡಬೇಕಿದೆ. ಚುನಾವಣಾ ಆಯೋಗವು ಮತ್ತು ಚುನಾವಣಾ ಅಧಿಕಾರಿಗಳು ಯುವ ಮತದಾರರನ್ನು ಮತದಾನ ಕಡೆ ಸೆಳೆಯಲು ಸಾಮಾಜಿಕ ಜಾಲತಾಣಗಳಲ್ಲಿಯೂ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...