ಕುಡಿಯುವ ನೀರು ಸರಬರಾಜಿಗೆ ಪ್ರಥಮ ಆದ್ಯತೆ ನೀಡಲಾಗುವುದು- ಪುರಸಭಾಧ್ಯಕ್ಷೆ ಜಬೀನ್‌ ತಾಜ್‌

Source: sonews | By Staff Correspondent | Published on 2nd January 2019, 11:37 PM | State News |

ಶ್ರೀನಿವಾಸಪುರ: ಪಟ್ಟಣದ ಕುಡಿಯುವ ನೀರು ಸರಬರಾಜಿಗೆ ಪ್ರಥಮ ಆದ್ಯತೆ ನೀಡಲಾಗುವುದು. ನೀರಿನ ಸಮಸ್ಯೆ ಇರುವ ಬಡಾವಣೆಗಳಿಗೆ ಟ್ಯಾಂಕರ್ಮೂಲಕ ನೀರು ಸರಬರಾಜು ಮಾಡಲಾಗುವುದು ಎಂದು ಪುರಸಭಾಧ್ಯಕ್ಷೆ ಜಬೀನ್ತಾಜ್ಹೇಳಿದರು.

ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸರ್ವಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಟ್ಟಣದ ಇಂದಿರಾ ನಗರದಲ್ಲಿ ಕುಡಿಯುವ ನೀರು ಸಮಸ್ಯೆ ಇದ್ದು, ಅಲ್ಲಿ ಹೊಸದಾಗಿ ಮೂರು ಕೊಳವೆ ಬಾವಿ ನಿರ್ಮಿಸಲಾಗುವುದು. ಉನಿಕಿಲಿ ಬಡಾವಣೆ ಜನರ ಕುಡಿಯುವ ನೀರು ಬವಣೆ ನೀಗಲು ಮೂರು ಕೊಳವೆ ಬಾವಿಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

ಮುಖ್ಯಾಧಿಕಾರಿ ವಿ.ಮೋಹನ್ಕುಮಾರ್ಮಾತನಾಡಿ, ರೂ.77 ಲಕ್ಷ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಪಟ್ಟಣದಲ್ಲಿ ಸಾಂಕ್ರಾಮಿಕ ರೋಗಗಳು ಹರಡಂತೆ ತಡೆಯಲು ಸುರಕ್ಷಿತಾ ಪರಿಕರ ತರಿಸಿ ಬಳಸಲಾಗುವುದು. 24/1 ಯೋಜನೆಯಡಿ 24 ಫಲಾನುಭವಿಗಳಾಇಗೆ ಹಾಗೂ 7/25 ಯೋಜನೆಯಡಿ 30 ಫಲಾನುಭವಿಗಳಿಗೆ ಉಚಿತ ಅನಿಲ ಸಂಪರ್ಕ ಕಲ್ಪಿಸಲಾಗುವುದು ಎಂದು ಹೇಳಿದರು.

ಪಟ್ಟಣದಲ್ಲಿ ಸ್ವಚ್ಛತೆ ಪಾಲನೆ ಹಾಗೂ ಪ್ಲಾಸ್ಟಿಕ್ನಿಯಂತ್ರಣಕ್ಕೆ ನಾಗರಿಕರು ಸಹಕರಿಸಬೇಕು. ಆರೋಗ್ಯಕರ ಪರಿಸರ ನಿರ್ಮಾಣ ಮಾಡಲು ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಪಟ್ಟಣದ ಎಲ್ಲ 23 ವಾರ್ಡ್ಗಳಲ್ಲಿ ವಾರ್ಷಿಕವಾಗಿ ಪಂಪ್ಸೆಟ್ನಿರ್ವಹಣೆಗೆ ಟೆಂಡರ್ಕರೆಯಲು, ರೂ.77 ಲಕ್ಷ ವೆಚ್ಚದಲ್ಲಿ ವಿವಿಧ ಕಾಮಗಾರಿ ಕೈಗೊಳ್ಳಲು, ಸಿಸಿ ರಸ್ತೆ, ಚರಂಡಿ ನಿರ್ಮಿಸಲು, ಸ್ವಚ್ಛತೆ ಕಾಪಾಡಲು ಸದಸ್ಯರು ಅನುಮೋದನೆ ನೀಡಿದರು.

ಪುರಸಭೆ ಉಪಾಧ್ಯಕ್ಷ ಟಿಎಂವಿ ಮುಕ್ತಿಯಾರ್‌, ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್, ಎಂಜಿನಿಯರ್ಶ್ರೀನಿವಾಸ್‌, ಸಿಎಒ ರಾಜೇಶ್ವರಿ, ನಾಗೇಶ್‌, ದೀಪಾ, ವನಜಾಕ್ಷಮ್ಮ ಇದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...