ಹಕ್ಕು ಮತ್ತು ಕರ್ತವ್ಯಗಳನ್ನು ಸಮಾನವಾಗಿ ಸ್ವೀಕರಿಸಿ- ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌

Source: sonews | By Staff Correspondent | Published on 26th January 2019, 10:41 PM | State News |

ಶ್ರೀನಿವಾಸಪುರ: ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸಬೇಕು. ಹಕ್ಕು ಮತ್ತು ಕರ್ತವ್ಯಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌ ಹೇಳಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ಡಾ. ಬಿ.ಆರ್.ಅಂಬೇಡ್ಕರ್‌ ಅವರ ದೂರದೃಷ್ಟಿಯ ಫಲವಾಗಿ ದೇಶ ಅತ್ಯುತ್ತಮ ಸಂವಿಧಾನ ಪಡೆಯಲು ಸಾಧ್ಯವಾಯಿತು ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನಕ್ಕೆ ಹೆಚ್ಚಿನ ಮಾನ್ಯತೆ ಇದೆ. ಇಲ್ಲಿ ಪ್ರಜೆಯೇ ಪ್ರಭು. ಪ್ರಜೆಯ ಇಚ್ಛೆಯಂತೆ ದೇಶದ ಆಡಳಿತ ನಡೆಯುತ್ತದೆ. ದೇಶದ ರಕ್ಷಣೆ ಎಲ್ಲರ ಹೊಣೆ. ದೇಶದ ಸ್ವಾತಂತ್ರ್ಯ ಹಾಗೂ ಅಭಿವೃದ್ಧಿಗಾಗಿ ಹಲವು ಮಹನೀಯರು ಶ್ರಮಿಸಿದ್ದಾರೆ. ಅವರ ಆದರ್ಶ ಪಾಲನೆ ಮಾಡುತ್ತ ದೇಶ ಕಟ್ಟಬೇಕು ಎಂದು ಹೇಳಿದರು.

ಮೈದಾನದಲ್ಲಿ ಪೊಲೀಸ್‌, ಗೃಹ ರಕ್ಷಕ ದಳ, ಎನ್‌ಸಿಸಿ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಪಥ ಸಂಚಲನ ಏರ್ಪಡಿಸಲಾಗಿತ್ತು. ಬೇರೆ ಬೇರೆ ಶಾಲೆಗಲ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ನಡೆಸುವ ವಸತಿ ಶಾಲೆಗಳಲ್ಲಿ ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ್ದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ನೆನಪಿನ ಕಾನಿಕೆ ನೀಡಿ ಸನ್ಮಾನಿಸಲಾಯಿತು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎನ್‌.ನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಶಂಶುನ್ನೀಸಾ, ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌, ಉಪಾಧ್ಯಕ್ಷ ಟಿ.ಎಂ.ಬಿ ಮುಕ್ತಿಯಾರ್ ಅಹಮ್ಮದ್, ಸರ್ದಾರ್‌, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್‌, ರಾಜ್ಯ ಎಪಿಎಂಸಿ ನಿರ್ದೇಶಕ ಎನ್‌.ರಾಜೇಂದ್ರಪ್ರಸಾದ್‌, ಮುಖಂಡ ಕೆ.ಕೆ.ಮಂಜು, ಕಾರ್ಯದರ್ಶಿ ಕೃಷ್ಣಪ್ಪ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಶ್ರೀನಿವಾಸಮೂರ್ತಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಾಗರಾಜ್‌, ಉಪಾಧ್ಯಕ್ಷ ಡಾ. ಆರ್‌.ರವಿಕುಮಾರ್‌, ಪೊಲೀಸ್‌ ಸರ್ಕಲ್‌ ಇನ್ಸ್‌ಪೆಕ್ಟರ್‌ ಎಂ.ವೆಂಕಟರಾಮಪ್ಪ.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...