ಕಾರ್ಖಾನೆಯೊಂದರಲ್ಲಿ ಸ್ಫೋಟ 10 ಮಂದಿ ಮೃತ

Source: sonews | By Staff Correspondent | Published on 23rd February 2019, 5:59 PM | National News |

ಉತ್ತರ ಪ್ರದೇಶ: ಕಾರ್ಪೆಟ್ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಿಂದ 10 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯಲ್ಲಿ ಇಂದು ನಡೆದಿದೆ. ಕಟ್ಟಡದಲ್ಲಿ ಇಡಲಾಗಿದ್ದ ಪಟಾಕಿಗಳಿಂದ ಈ ಅನಾಹುತ ಸಂಭವಿಸಿದೆ ಎಂದು ವರದಿಯಾಗಿದೆ.

ಸ್ಫೋಟದ ತೀವ್ರತೆಗೆ ಇಡೀ ಕಟ್ಟಡವೇ ಉರುಳಿದ್ದು, ಮೂರು ಮನೆಗಳು ಕುಸಿದುಬಿದ್ದಿವೆ. “ಸ್ಫೋಟ ಸಂಭವಿಸಿದಾಗ ಕಾರ್ಪೆಟ್ ಫ್ಯಾಕ್ಟರಿಯಲ್ಲಿ ಕೆಲ ಕೆಲಸಗಾರರಿದ್ದರು. ಅದೇ ಫ್ಯಾಕ್ಟರಿಯಲ್ಲಿ ಅಕ್ರಮವಾಗಿ ಪಟಾಕಿ ತಯಾರಿಸಲಾಗುತ್ತಿತ್ತು. ಅವಶೇಷಗಳಡಿ ಹಲವರು ಸಿಲುಕಿರುವ ಸಾಧ್ಯತೆಯೂ ಇದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Read These Next

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...