ಫಿಫಾ ವಿಶ್ವಕಪ್ 2018: ಮೊರೊಕ್ಕೊ ವಿರುದ್ಧ ಗೆದ್ದ ಇರಾನ್

Source: so news | By MV Bhatkal | Published on 16th June 2018, 6:06 PM | Sports News | Don't Miss |

ಸೇಂಟ್‌ ಪೀಟರ್ಸ್‌ಬರ್ಗ್‌: 21ನೇ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಮೊರೊಕ್ಕೊ ವಿರುದ್ಧ ಇರಾನ್ ತಂಡ    1–0 ಗೋಲುಗಳಿಂದ ಗೆಲುವು ಸಾಧಿಸಿದೆ.
ಇಂದು ಕ್ರೆಸ್ಟೊವ್ ಸ್ಕಿ ಕ್ರೀಡಾಂಗಣದಲ್ಲಿ ನಡೆದ ಬಿ ಗುಂಪಿನ ಹಣಾಹಣಿಯಲ್ಲಿ ಇರಾನ್‌ ತಂಡ ಮೊರೊಕ್ಕೊವನ್ನು ಸೋಲಿಸುವ ಮೂಲಕ ಗೆಲುವಿನ ಅಭಿಯಾನ ಆರಂಭಿಸಿದೆ.
ಉಭಯ ತಂಡಗಳು ವಿಶ್ವಕಪ್ ನಲ್ಲಿ ಇದೇ ಮೊದಲ ಬಾರಿಗೆ ಮುಖಾಮುಖಿಯಾಗಿದ್ದು, 90 ನಿಮಿಷದ ರೋಚಕ ಹಣಾಹಣಿಯಲ್ಲಿ ಯಾವುದೇ ಗೋಲು ದಾಖಲಾಗಲಿಲ್ಲ. ಆದರೆ ಹೆಚ್ಚುವರಿ ಸಮಯದಲ್ಲಿ ಇರಾನ್ ಗೋಲು ಬಾರಿಸಿ ಗೆಲುವು ದಾಖಲಿಸಿತು.
ಮಸೌದ್‌ ಶೋಜಾಯಿ ಸಾರಥ್ಯದ ಇರಾನ್‌ ತಂಡ ವಿಶ್ವಕಪ್ ನಲ್ಲಿ ಒಮ್ಮೆಯೂ ನಾಕೌಟ್ ಹಂತ ಪ್ರವೇಶಿಸಿಲ್ಲ. ಟೂರ್ನಿಯಲ್ಲಿ ಒಟ್ಟು 12 ಪಂದ್ಯಗಳನ್ನು ಆಡಿರುವ ತಂಡ ಒಂದರಲ್ಲಿ ಗೆದ್ದಿದೆ. 1998ರ ವಿಶ್ವಕಪ್‌ ಟೂರ್ನಿಯ ಪಂದ್ಯದಲ್ಲಿ ಈ ತಂಡ 2–1 ಗೋಲುಗಳಿಂದ ಅಮೆರಿಕವನ್ನು ಸೋಲಿಸಿತ್ತು.

Read These Next

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...