ಕಾಶ್ಮೀರದಲ್ಲಿ ಭಾರೀ ಹಿಮಪಾತ : ಸೇನಾಧಿಕಾರಿ ಸೇರಿ ಐವರು ಬಲಿ

Source: ಉದಯವಾಣಿ | Published on 26th January 2017, 2:57 AM | National News |

ಶ್ರೀನಗರ: ಕಾಶ್ಮೀರದ ಗಾಂದರ್ಬಲ್‌ನ ಸೋನ್‌ಮಾರ್ಗ್‌ನಲ್ಲಿ ಭಾರೀ ಹಿಮಪಾತ ಸಂಭವಿಸಿದ್ದು ಓರ್ವ ಸೇನಾಧಿಕಾರಿ ಸೇರಿ ಐವರು ನಾಗರಿಕರು ಬಲಿಯಾಗಿರುವ ಬಗ್ಗೆ ವರದಿಯಾಗಿದೆ.  

ಬುಧವಾರ ಮಧ್ಯಾಹ್ನ ಸೇನಾ ಕ್ಯಾಂಪ್‌ನ ಮೇಲೆ ಹಿಮದ ಗುಡ್ಡೆಗಳು ಕುಸಿದು ಬಿದ್ದ ಪರಿಣಾಮ ದುರ್ಘ‌ಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಇನ್ನೊಂದು ಅವಘಡದಲ್ಲಿ ಗಡಿ ನಿಯಂತ್ರಣ ರೇಖೆಯ ಬಳಿಯಿರುವ ಗುರೇಜ್‌ ಸೆಕ್ಟರ್‌ನಲ್ಲಿ ಹಿಮಗಡ್ಡೆ ಮನೆಯ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರು ಹಬಿಬುಲ್ಲಾ ಲೋನ್‌,ಆತನ ಪತ್ನಿ, ಪುತ್ರ ಮತ್ತು ಪುತ್ರಿ ಎಂದು ಪೊಲೀಸರು ತಿಳಿಸಿದ್ದಾರೆ. 

ಮೃತ ಸೇನಾಧಿಕಾರಿಯ ಕಳೇಬರವನ್ನು ಹಿಮದಿಂದ ಹೊರ ತೆಗೆಯಲಾಗಿದೆ ಎಂದು ತಿಳಿದು ಬಂದಿದ್ದು ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

ಕಾಶ್ಮೀರದಲ್ಲಿ ವ್ಯಾಪಕ ಹಿಮಪಾತ ಸಂಭವಿಸಿತ್ತಿದ್ದು, ಕನಿಷ್ಠ ತಾಪಮಾನ ಧಿ7 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಸೇನಾ ಕ್ಯಾಂಪ್‌ ಗಳು ಹಿಮದಿಂದ ಆವೃತ್ತವಾಗಿವೆ ಎಂದು ವರದಿಗಳು ತಿಳಿಸಿವೆ.  

ಹಿಮ ಪರ್ವತಗಳ ಅಡಿಯಲ್ಲಿದ್ದ  80ಕ್ಕೂ ಹೆಚ್ಚು ಹಳ್ಳಿಗಳ ಜನರನ್ನು ಮುಂಜಾಗೃತ ಕ್ರಮವಾಗಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...