ಶಿವಾರಪಟ್ಟಣದ ಅಭಿವೃದ್ದಿಗೆ ರೂಪು ರೇಷೆ ಸಿದ್ದಪಡಿಸಲು-ಸಚಿವ ಕೃಷ್ಣ ಬೈರೇಗೌಡ ಸೂಚನೆ

Source: sonews | By Staff Correspondent | Published on 25th September 2018, 10:55 PM | State News | Don't Miss |

ಕೋಲಾರ: ಶಿಲ್ಪ ಕಲೆಗೆ ಹೆಸರಾದ ಕೋಲಾರ ಜಿಲ್ಲೆಯ ಶಿವಾರಪಟ್ಟಣದ ಅಭಿವೃದ್ದಿಗೆ ಪೂರಕವಾಗುವಂತೆ ಹಾಗೂ ಶಿಲ್ಪಿಗಳ ಅನುಕೂಲಕ್ಕೆ ಬೇಕಾಗುವ ಪ್ರಸ್ತಾವನೆಯೊಂದನ್ನು ಸೂಕ್ತ ರೂಪು-ರೇಷೆಯೊಂದಿಗೆ ಸಿದ್ದಪಡಿಸಿ ಸಲ್ಲಿಸುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ರವರು ಸೂಚಿಸಿದ್ದಾರೆ.  
   
ಈ ದಿನ ಬೆಂಗಳೂರಿನ ವಿಕಾಸ ಸೌಧದಲ್ಲಿರುವ ಸಚಿವರ ಕೊಠಡಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಈ ಕುರಿತು ಸಚಿವರು ಸೂಚನೆ ನೀಡಿದ್ದಾರೆ. ಕಳೆದ ಹಲವು ದಿನಗಳ ಹಿಂದೆ ಜಿಲ್ಲಾ ಪ್ರವಾಸದ ಸಮಯದಲ್ಲಿ ಶಿವಾರಪಟ್ಟಣದ ಶಿಲ್ಪ ಕಲಾ ಸಹಕಾರ ಸಂಘ ಲಿಮಿಟೆಡ್ ಇವರು ಸಚಿವರಿಗೆ ಮನವಿಯೊಂದನ್ನು ಸಲ್ಲಿಸಿ, ಶಿವಾರಪಟ್ಟಣದ ಶಿಲ್ಪ ಕಲಾ ಅಭಿವೃದ್ದಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಕೋರಿದ್ದರು. ಈ ಹಿನ್ನೆಲೆಯಲ್ಲಿ ಕನ್ನಡ ಸಂಸ್ಕøತಿ, ಪ್ರವಾಸೋದ್ಯಮ ಹಾಗೂ ಜಿಲ್ಲಾಡಳಿತದ ಉನ್ನತಾಧಿಕಾರಿಗಳ ಸಭೆಯೊಂದನ್ನು ಇಂದು ಸಚಿವರ ಕೊಠಡಿಯಲ್ಲಿ ಆಯೋಜಿಸಲಾಗಿತ್ತು.  
        
ಸಭೆಯಲ್ಲಿ ಮಾತನಾಡಿದ ಸಚಿವ ಶ್ರೀ ಕೃಷ್ಣ ಬೈರೇಗೌಡ ಶಿಲ್ಪಕಲೆ ಅತ್ಯಂತ ಪ್ರಾಚೀನವಾದ ಮತ್ತು ಮಹತ್ವದ ಕಲೆಗಳಲ್ಲಿ ಒಂದು ಕೋಲಾರ ಜಿಲ್ಲೆಯಲ್ಲಿ ಇಡೀ ಗ್ರಾಮವೇ ಶಿಲ್ಪ ಕಲೆಯನ್ನು ರೂಢಿಸಿಕೊಂಡು ಜೀವಿಸುತ್ತಿದೆ.  ಈ ಗ್ರಾಮವನ್ನು ಒಂದು ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡಬೇಕು ಹಾಗೂ ಇಲ್ಲಿನ ಶಿಲ್ಪಿಗಳಿಗೆ ವೃತ್ತಿ ನೈಪುಣ್ಯತೆ ಮತ್ತು ಮಾರುಕಟ್ಟೆ ಒದಗಿಸುವ ಯೋಜನೆಯೊಂದನ್ನು ರೂಪಿಸಬೇಕು ಇದಕ್ಕೆ ಪೂರಕವಾಗುವಂತೆ ಸೂಕ್ತ ಪ್ರಸ್ತಾವನೆಯೊಂದನ್ನು ಸಿದ್ದಪಡಿಸಿ ಸಲ್ಲಿಸುವಂತೆ ಸೂಚನೆ ನೀಡಿದರು. ಸಾಧ್ಯವಿರುವ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಶಿವಾರಪಟ್ಟಣದ ಶಿಲ್ಪಕಲೆಗೆ ಪೂರಕವಾಗುವಂತೆ ಬೇಕಾಗಿರುವ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.  ಶಿಲ್ಪ ಕಲಾ ಅಕಾಡೆಮಿ ವತಿಯಿಂದ ಸಾಧ್ಯವಾದಷ್ಟು ಹೆಚ್ಚು ಹೆಚ್ಚಾಗಿ ಕಾರ್ಯಾಗಾರ ಹಾಗೂ ತರಬೇತಿ ಶಿಬಿರಗಳನ್ನು ಆಯೋಜಿಸುವಂತೆ ಹೇಳಿದರು.
    
ಸಭೆಯಲ್ಲಿ ಕೋಲಾರ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಕನ್ನಡ ಸಂಸ್ಕøತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ   ಹಾಗೂ ಪುರಾತತ್ವ ಮತ್ತು ಪರಂಪರೆ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು. 
 

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...