ಗಾಂಜಾ ಸಾಗಾಟ ಯತ್ನ: ಆರೋಪಿ ಪರಾರಿ

Source: S.O. News Service | By MV Bhatkal | Published on 12th February 2019, 4:05 PM | Coastal News | Don't Miss |

ಭಟ್ಕಳ: ದ್ವಿಚಕ್ರ ವಾಹನದ ಮೂಲಕ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯೋರ್ವ ಲಾರಿಗೆ ಢಿಕ್ಕಿ ಹೊಡೆದು ಗಾಯಗೊಂಡಿದ್ದು, ನಂತರ ಸಾವರಿಸಿಕೊಂಡು ಬಂಧನದ ಭಯದಿಂದ ಪರಾರಿಯಾಗಿರುವ ಘಟನೆ ತಾಲೂಕಿನ ಕ್ವಾಲಿಟಿ ಹೊಟೆಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ  ನಡೆದಿದೆ.
 ಆರೋಪಿಯನ್ನು ಪ್ರಸ್ತುತ ತಾಲೂಕಿನ ಮಣ್ಕುಳಿಯಲ್ಲಿ ನೆಲೆಸಿರುವ ಇಮ್ರಾನ್ ಶೇಕ್ (35) ಎಂದು ಗುರುತಿಸಲಾಗಿದೆ. ಅಪಘಾತಕ್ಕೀಡಾದವನನ್ನು ಸುತ್ತಮುತ್ತಲಿನ ಜನರು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ನಂತರ ವಾಹನವನ್ನು ಮೇಲಕ್ಕೆತ್ತಲು ಬಂದವರಿಗೆ ಗಾಂಜಾ ಇರುವುದು ಕಂಡು ಬಂದಿದ್ದು, ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಆರೋಪಿ ಇಮ್ರಾನ್, ಪೊಲೀಸ್ ಬಂಧನದ ಭಯದಿಂದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರಕ್ಕೆ ತೆರಳುವುದಾಗಿ ಹೇಳಿ ಅಲ್ಲಿಂದ ಪರಾರಿಯಾಗಿದ್ದಾನೆ. ತಂಜೀಮ್ ಪ್ರಧಾನ ಕಾರ್ಯದರ್ಶಿ ಆಲ್ತಾಫ್ ಖರೂರಿ, ಇಮ್ತಿಯಾಝ್ ಉದ್ಯಾವರ ಮತ್ತಿತರರು ಸ್ಥಳಕ್ಕೆ ಆಗಮಿಸಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಭಟ್ಕಳದಲ್ಲಿ ದಿನದಿಂದ ದಿನಕ್ಕೆ ಯುವಕರಲ್ಲಿ ಗಾಂಜಾ ಸೇವನೆ ಹೆಚ್ಚುತ್ತಿರುವುದು ಕಂಡು ಬಂದಿದ್ದು, ಇಲ್ಲಿ ನಡೆಯುತ್ತಿರುವ ಗಾಂಜಾ ಮಾರಾಟಕ್ಕೆ ಪೊಲೀಸರೇ ನೇರ ಕಾರಣರಾಗಿದ್ದಾರೆ ಎಂದು ಮುಸ್ಲೀಮ್ ಯೂಥ್ ಫೆಡರೇಶನ್ನಿನ ಅಧ್ಯಕ್ಷ ಇಮ್ತಿಯಾಜ್ ಉದ್ಯಾವರ ಆರೋಪಿಸಿದ್ದಾರೆ. 

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...