ಕೇರಳ ಕರ್ನಾಟಕ ಗಡಿಯಲ್ಲಿ ಗ್ಯಾಸ್ ಸೋರಿಕೆ - ಕರ್ನಾಟಕ ಗಡಿಯಲ್ಲಿ ಸಂಚಾರ ಅಸ್ತವ್ಯಸ್ತ

Source: so news | By MV Bhatkal | Published on 13th March 2019, 10:03 PM | Coastal News | Don't Miss |

 

ಮಂಗಳೂರು: ಕರ್ನಾಟಕ ಕೇರಳ ಗಡಿಭಾಗವಾದ ಕೇರಳ ರಾಜ್ಯ ವ್ಯಾಪ್ತಿಯ ತಲಪಾಡಿ ಆರ್ ಟಿ ಒ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಲಾಗಿದ್ದ ಟ್ಯಾಂಕರೊಂದರಲ್ಲಿ ಗ್ಯಾಸ್ ಸೋರಿಕೆ ಉಂಟಾಗಿ  ಕರ್ನಾಟಕದ ಭಾಗವಾದ ತಲಪಾಡಿಯಲ್ಲಿ ಸಂಚಾರ ಅಸ್ತವ್ಯಸ್ತವಾದ ಘಟನೆ‌ ನಡೆದಿದೆ.
ಮಂಗಳೂರಿನಿಂದ ಕಾಸರಗೋಡು ತೆರಳುತ್ತಿದ್ದ  ಟ್ಯಾಂಕರಿನ ಮೇಲ್ಬಾಗದಿಂದ ಗ್ಯಾಸ್ ಮೇಲಕ್ಕೆ ಸ್ಪ್ರೇ ಆಗುತಿತ್ತು. ಕೂಡಲೇ ಮಂಜೇಶ್ವರ ಪೊಲೀಸರು ಹಾಗೂ ಅಗ್ನಿಶಾಮಕ ದಳ ಆಗಮಿಸಿ ಸುರಕ್ಷತೆಗೆ ಕ್ರಮ ಕೈಗೊಂಡಿದ್ದಾರೆ.
ಕಾಸರಗೋಡು ಭಾಗದಿಂದ ಆಗಮಿಸುತ್ತಿರುವ ವಾಹನಗಳನ್ನು ತೂಮಿನಾಡಿನಲ್ಲಿ ತಡೆದು ಒಳ ರಸ್ತೆಯಿಂದಾಗಿ ತಲಪಾಡಿ ಭಾಗಕ್ಕೆ ಕಳುಹಿಸಲಾಗಿತ್ತು. ವಿದ್ಯುತ್ ಸಂಪರ್ಕವನ್ನು ಸಂಪೂರ್ಣವಾಗಿ ಕಡಿತಗೊಳಿಸಲಾಯಿತು.
ಘಟನಾ ಸ್ಥಳದಲ್ಲಿ ಸುರಕ್ಷತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಸೋರಿಕೆಯಿಂದ ಆಪಾಯ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಟ್ಯಾಂಕರ್ ಸಮೀಪವಿದ್ದ ವ್ಯಾಪಾರ ಕೇಂದ್ರಗಳನ್ನು ಮುಚ್ಚುಗಡೆಗೊಳಿಸಲಾಯಿತು.
 ಮಂಗಳೂರಿನಿಂದ ಕಾಸರಗೋಡು ಭಾಗಕ್ಕೆ ಆಗಮಿಸುವ ಟ್ಯಾಂಕರಿನಲ್ಲಿ ಗ್ಯಾಸ್ ಸೋರಿಕೆ ಉಂಟಾಗಿ  ಕರ್ನಾಟಕದ ಗಡಿಭಾಗದಲ್ಲಿ ಸಂಚಾರ ಅಸ್ತವ್ಯಸ್ತವಾಯಿತು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...