ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನಲ್ಲಿ "ಅಭ್ಯುದಯ 2019"

Source: sonews | By Staff Correspondent | Published on 18th January 2019, 5:28 PM | Coastal News | Don't Miss |

ಭಟ್ಕಳ: ನಗರದ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನಲ್ಲಿ ಉತ್ತರ ಕನ್ನಡ ಜಿಲ್ಲಾ ಆಹ್ವಾನಿತ ಅಂತರ್ ಪದವಿ ಕಾಲೇಜುಗಳ ವಿಷಯ ಪ್ರಸ್ತುತಿ ಸ್ಪರ್ಧೆ (ಪೇಪರ್ ಪ್ರೆಸೆಂಟೇಶನ್) "ಅಭ್ಯುದಯ 2019"ಜರುಗಿತು.  

ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದ ಬಿ.ಸಿ.ಎ. ವಿಭಾಗದ ಮುಖ್ಯಸ್ಥ ಶ್ರೀಧರ ಆಚಾರ್ಯ ಮಾತನಾಡಿ " ವಿದ್ಯಾರ್ಥಿಗಳು ತರಗತಿಯಲ್ಲಿ ಕಲಿತ ವಿಷಯವನ್ನು ಪರಿಣಾಮಕಾರಿ ಬಳಸಿಕೊಳ್ಳುವುದರ ಜೊತೆಗೆ ಕೌಶಲ್ಯವನ್ನು ಮೈಗೂಡಿಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು" ಎಂದು ಕರೆ ನೀಡಿದರು. 

ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಟ್ಕಳ ಎಜ್ಯುಕೇಷನ್ ಟ್ರಸ್ಟ್‍ನ ಅಧ್ಯಕ್ಷರಾದ ಡಾ. ಸುರೇಶ ನಾಯಕ ಮಾತನಾಡಿ " ಯುವಜನತೆ ತಮಗೆ ದೊರೆತ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು" ಎಂದು ತಿಳಿ ಹೇಳಿದರು.  

ಈ ಸಂದರ್ಭದಲ್ಲಿ ಭಟ್ಕಳ ಎಜ್ಯುಕೇಷನ್ ಟ್ರಸ್ಟ್‍ನ ಟ್ರಸ್ಟಿ ಮ್ಯಾನೇಜರ್ ರಾಜೇಶ ನಾಯಕ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಟ್ರಸ್ಟ್‍ನ ಆಡಳಿತಾಧಿಕಾರಿ ಹಾಗೂ ಪ್ರಾಂಶುಪಾಲ ನಾಗೇಶ ಭಟ್ಟ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸೈಬರ್ ಸೆಕ್ಯುರಿಟಿ, ಉತ್ತರ ಕನ್ನಡ ಜಿಲ್ಲೆ ಮತ್ತು ಸಣ್ಣ ಕೈಗಾರಿಕೆಗಳು, ಜಿ.ಎಸ್.ಟಿ ಸ್ಟಾರ್ಟಪ್ ಇಂಡಿಯಾ, ಡಿಜಿಟಲ್ ಪೇಮೆಂಟ ಮುಂತಾದ ವಿಷಯಗಳನ್ನು ಪ್ರಸ್ತುತ ಪಡಿಸಿದರು.

ಬಿ.ಸಿ.ಎ ಕಾಲೇಜಿನ ಪ್ರಾಂಶುಪಾಲ ಶ್ರೀನಾಥ ಪೈ ಸ್ವಾಗತಿಸಿದರು, ಉಪನ್ಯಾಸಕ ವಿಶ್ವನಾಥ ಭಟ್ಟ ವಂದಿಸಿದರು. ಬಿ.ಕಾಂ ಕಾಲೇಜಿನ ಸಂಯೋಜಕ ಫಣಿಯಪ್ಪ ಹೆಬ್ಬಾರ ವರದಿ ವಾಚಿಸಿದರು. ಉಪನ್ಯಾಸಕರು ಹಾಗೂ ಉತ್ತರ ಕನ್ನಡ ಜಿಲ್ಲೆಯ ನೂರಕ್ಕೂ ಹೆಚ್ಚು ಪದವಿ ವಿದ್ಯಾರ್ಥಿಗಳು ಹಾಜರಿದ್ದರು.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...