ಹ್ಯಾಮರ್ ಥ್ರೋ; ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲೆ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Source: sonews | By Staff Correspondent | Published on 21st November 2018, 5:47 PM | Coastal News | State News | Don't Miss | Sports News |

ಭಟ್ಕಳ: ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ಬುಧವಾರ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ಅಥ್ಲೆಟಿಕ್ಸ್ ನಲ್ಲಿ ಭಟ್ಕಳದ ಅಂಜುಮನ್ ಹಾಮಿಯೇ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿ ಸೈಯ್ಯದ್ ಮುಬೀನ್ ಸೈಯ್ಯದ್ ಸುಲ್ತಾನ್ ಎಸ್.ಎಂ. ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ ಎಂದು ದೈಹಿಕ ಶಿಕ್ಷಣ ಶಿಕ್ಷಕ ರಾಜಾಸಾಬ್ ಮಂಡ್ಯದಿಂದ ದೂರವಾಣಿ ಮೂಲಕ ವಾರ್ತಾಭಾರತಿಗೆ ಮಾಹಿತಿ ನೀಡಿದ್ದಾರೆ. 

ಸದರಿ ವಿದ್ಯಾರ್ಥಿ ವಲಯ, ತಾಲೂಕು ಹಾಗೂ ಜಿಲ್ಲಾಮಟ್ಟದ ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದನು. ಬುಧವಾರ ಆದಿಚುಂಚನಗಿರಿಯಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ಡಿ 24ರಿಂದ ದೆಹಲಿಯಲ್ಲಿ ಜರಗುವ ರಾಷ್ಟ್ರೀಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆರ್ಹತೆಯನ್ನು ಪಡೆದುಕೊಂಡಿದ್ದಾಗಿ ಮಾಹಿತಿ ನೀಡಿದ ಅವರು ಅಲ್ಲಿಯೂ ಉತ್ತಮ ಪ್ರದರ್ಶನ ನೀಡುವದರ ಮೂಲಕ ರಾಜ್ಯ ಹಾಗೂ ಜಿಲ್ಲೆಗೆ ಖ್ಯಾತಿ ತರಲಿದ್ದಾನೆ ಎಂದು ತಿಳಿಸಿದ್ದಾರೆ. 

ವಿದ್ಯಾರ್ಥಿಯ ಸಾಧನೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿರುವ ಸಂಸ್ಥೆಯ ಅಧ್ಯಕ್ಷ ಜುಕಾಕೋ ಅಬ್ದುಲ್ ರಹೀಮ್, ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಸಿದ್ದೀಖ್, ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಇಸ್ಹಾಖ್ ಶಾಬಂದ್ರಿ ಹಾಗೂ ಶಾಲೆಯ ಮುಖ್ಯಾಧ್ಯಾಪಕ ಶಬ್ಬಿರ್ ಆಹ್ಮದ್ ದಫೆದಾರ್ ತರಬೇತುದಾರರಾದ ಫಾರೂಖ್ ಘನಿ ಹಾಗೂ ರಾಜಾಸಾಬ್ ರನ್ನು ಅಭಿನಂದಿಸಿದ್ದಾರೆ. 
 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್