ಕರಾವಳಿಯಾದ್ಯಂತ ಧಾರಾಕಾರ ಮಳೆ: ಗೋಡೆ ಕುಸಿದು ಇಬ್ಬರು ಸಾವು

Source: s o news | By MV Bhatkal | Published on 7th July 2018, 12:08 PM | Coastal News |

ಮಂಗಳೂರು : ಕರಾವಳಿಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ತಡೆಗೋಡೆ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಹೆಬ್ಬಾರಬೈಲಿನಲ್ಲಿ ತಡರಾತ್ರಿ ಮನೆಯಲ್ಲಿ ಮಲಗಿದ್ದ ಅಜ್ಜಿ ಪಾರ್ವತಿ(65) ಮತ್ತು ಮೊಮ್ಮಗ ಧನುಷ್(11) ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪುತ್ತೂರು ಸಹಾಯಕ ಕಮಿಷನರ್ ಎಚ್.ಕೃಷ್ಣಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎರಡನೇ ದಿನವೂ ಮುಂದುವರಿದ ಮಳೆ

ಉಡುಪಿ, ಕುಂದಾಪುರ, ಕಾರ್ಕಳ, ಬೈಂದೂರು ತಾಲೂಕಿನಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿದ್ದು, ವಾಟ್ಸ್‌ಆ್ಯಪ್‌ನಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆಯಾಗಿರುವ ಕುರಿತು ಸಂದೇಶ ವೈರಲ್ ಆಗಿದೆ. ಆದರೆ ಜಿಲ್ಲಾಡಳಿತ ಯಾವುದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲ್ಲ.
ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸ್ಪಷ್ಟನೆ ನೀಡಿದ್ದು, ಸ್ಥಳೀಯ ಪರಿಸ್ಥಿತಿ ನೋಡಿಕೊಂಡು ರಜೆ ಘೋಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಈಗಾಗಲೇ ಬಿಇಒಗಳಿಗೆ ರಜೆ ಘೋಷಣೆ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೊಡಗಿನಲ್ಲಿ ಮಳೆ ಅಬ್ಬರ

ಕೊಡಗು ಜಿಲ್ಲೆಯಲ್ಲಿಯೂ ವರುಣನ ಅಬ್ಬರ ಮುಂದುವರಿದಿದ್ದು, ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಕೊಡಗು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...