ಪರೇಶ ಮೇಸ್ತಾ ಸಾವಿನ ಕುರಿತಾ ಊಹಾಪೂಹಗಳಿಗೆ ತೆರೆ;ಪೋಸ್ಟ್ ಮಾರ್ಟಮ್ ವರದಿ ಬಹಿರಂಗ

Source: sonews | By Staff Correspondent | Published on 11th December 2017, 10:29 PM | Coastal News | State News | National News | Incidents | Don't Miss |

ಪರೇಶ್ ಮೇಸ್ತ ಸಾವಿನ ಕುರಿತು ಹರಡುತ್ತಿರುವ ವದಂತಿಗಳು ಅಪ್ಪಟ ಸುಳ್ಳು: ಐಜಿಪಿ ಸ್ಪಷ್ಟನೆ

 

# ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕಠಿಣ ಕಾನೂನು ಕ್ರಮ: ಐಜಿಪಿ 

ಹೊನ್ನಾವರ: ಪರೇಶ್ ಮೇಸ್ತ ಸಾವು ಪ್ರಕರಣದ ಬಗ್ಗೆ ರಾಜಕೀಯ ಪಕ್ಷವೊಂದು ಡಿಸೆಂಬರ್ 9ರಂದು ಬಿಡುಗಡೆಗೊಳಿಸಿದ್ದ ಪತ್ರಿಕಾ ಪ್ರಕಟನೆ ಹಾಗು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವದಂತಿಗಳು ಅಪ್ಪಟ ಸುಳ್ಳು ಎಂದು ಸದ್ಯ ಕುಮಟಾದಲ್ಲಿ ಮೊಕ್ಕಾಂ ಹೂಡಿರುವ ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ವೈಯಕ್ತಿಕ ಹಿತಾಸಕ್ತಿಗಳಿಗಾಗಿ ಧರ್ಮದ ಆಧಾರಲ್ಲಿ ಸಮಾಜವನ್ನು ಒಡೆಯುವ ಹಾಗು ಕೋಮುಭಾವನೆಯನ್ನು ಕೆರಳಿಸಲು ನಡೆಸಿದ ಷಡ್ಯಂತ್ರ ಈ ವದಂತಿಗಳ ಹಿಂದಿದೆ ಎಂದವರು ಹೇಳಿದ್ದಾರೆ.

ಪತ್ರಿಕಾ ಪ್ರಕಟನೆ ಹಾಗು ಸಾಮಾಜಿಕ ಜಾಲತಾಣದಲ್ಲಿ ಮಾಡಲಾಗಿದ್ದ ಎಲ್ಲಾ ಆರೋಪಗಳನ್ನು ತನಿಖಾಧಿಕಾರಿ ಕಲೆ ಹಾಕಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರಿಗೆ ಇದನ್ನು ಕಳುಹಿಸಲಾಗಿತ್ತು. ಈ ಪ್ರಶ್ನೆಗಳಿಗೆ ಪ್ರತಿಕ್ರಿಯೆ ಇಂದು ಲಭಿಸಿದ್ದು, ಸತ್ಯಾಂಶ ಏನೆಂಬುದನ್ನು ತಿಳಿಸಿದೆ. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರ ವರದಿ ಸಾಮಾಜಿಕ ಜಾಲತಾಣದಲ್ಲಿ ಹಾಗು ಪತ್ರಿಕಾ ಪ್ರಕಟನೆಯಲ್ಲಿರುವ ಆರೋಪಗಳನ್ನು ಅಪ್ಪಟ ಸುಳ್ಳು ಎಂದು ಸಾಬೀತುಪಡಿಸಿದೆ. ಪಕ್ಷವೊಂದು ನೀಡಿದ ಪತ್ರಿಕಾ ಪ್ರಕಟನೆ ಹಾಗು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವದಂತಿಗಳು ವೈಯಕ್ತಿಕ ಹಿತಾಸಕ್ತಿಗಾಗಿ ಅಮಾಯಕ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುವ ತಂತ್ರವಾಗಿದೆ ಎಂದವರು ಹೇಳಿದ್ದಾರೆ.

ಹೊನ್ನಾವರದಲ್ಲಿ ನಡೆದ ಕೋಮು ಗಲಭೆಗೆ ಪ್ರಚೋದನೆ ನೀಡಿದವರು ಹಾಗು ಕುಮಟಾದಲ್ಲಿ ಇಂದು ಸಿಬ್ಬಂದಿಯೊಬ್ಬರ ಮೇಲೆ ನಡೆದ ಹಲ್ಲೆಯ ಹಿಂದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಿಂಬಾಳ್ಕರ್ ಹೇಳಿದ್ದಾರೆ.

ಪರೇಶ್ ಮೇಸ್ತಾ ಸಾವು ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ್ದ ಸಂಸದೆ ಶೋಭಾ ಕರಂದ್ಲಾಜೆ ‘ಇದು ಜಿಹಾದಿಗಳ ಕೃತ್ಯ’ ಎಂದು ಆರೋಪಿಸಿದ್ದರು. ಅಲ್ಲದೆ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಸೇರಿದಂತೆ ಹಲವು ಸಂಘಪರಿವಾರದ ನಾಯಕರು ಪ್ರಚೋದನಕಾರಿಯಾಗಿ ಮಾತನಾಡಿದ್ದರು. ಸಾಮಾಜಿಕ ಜಾಲತಾಣದಲ್ಲೂ ಸಂಘಪರಿವಾರದ ಮಂದಿ ಪರೇಶ್ ಮೇಸ್ತಾ ಸಾವಿನ ಬಗ್ಗೆ ಪ್ರಚೋದನಕಾರಿ ಪೋಸ್ಟ್, ಸಂದೇಶಗಳನ್ನು ಹರಡುತ್ತಿದ್ದರು. 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...