ಮನೆ ದರೋಡೆ; ೨ಲಕ್ಷ ನಗದು ಸಹಿತ ಅಪಾರ ಚಿನ್ನದೋಚಿ ಪರಾರಿ

Source: sonews | By sub editor | Published on 13th November 2018, 5:54 PM | Coastal News | State News | Don't Miss |

ಕುಮಟಾ: ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ದರೋಡೆಕೋರರು ಮನೆಯ ಮುಂಬಾಗಿಲು ಮುರಿದು ೨ಲಕ್ಷ ರೂ ನಗದು ಸೇರಿದಂತೆ ಅಪಾರ ಮೌಲ್ಯದ ಚಿನ್ನಾಭರಣ ದೋಚಿಕೊಂಡು ಪರಾರಿಯಾದ ಘಟನೆ ಕುಮಟಾ ತಾಲೂಕಿನ ಕೊಪ್ಪಳಕರವಾಡದಲ್ಲಿ ಜರಗಿದೆ.

ಝರಿನಾ ಶೇಕ್ ಎಂಬುವವರ ಮನೆಯೆ ದರೋಡೆಗೊಳಗಾಗಿದ್ದು ಇವರು ಕೊಲ್ಲಾಪುರದ ದರ್ಗಾವೊಂದಕ್ಕೆ ಕುಟುಂಬ ಸಮೇತ ತೆರಳಿದ್ದ ಸಂದರ್ಭವನ್ನು ಬಳಸಿಕೊಂಡ ಕಳ್ಳರು  36 ತೊಲೆ ಬಂಗಾರ, 2 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಕುಮಟಾ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Read These Next

ಗಡಿಯಾರ ವ್ಯಾಪಾರಿಯನ್ನು”ಭಯೋತ್ಪಾದಕ’ ಎಂದು ಬಿಂಬಿಸಿದ ಮಾಧ್ಯಮಗಳಿಗೆ ಛೀ,ಥೂ ಎನ್ನುತ್ತಿರುವ ಸಾರ್ವಜನಿಕರು

ಬೆಂಗಳೂರು: ಅಮಾಯಕ ಗಡಿಯಾರ ವ್ಯಾಪಾರಿಯೊಬ್ಬರನ್ನು ‘ಉಗ್ರ’ನೆಂದು ಬಿಂಬಿಸಿ ಕೆಲ ಸುದ್ದಿ ಚಾನೆಲ್ ಗಳು ಸುಳ್ಳು ವದಂತಿಗಳನ್ನು ...

ಬಿಜೆಪಿ ಹಿಂದುಳಿದವರನ್ನು ತುಳಿಯುವ ಸಂಚು ರೂಪಿಸಿದೆ, ಭಟ್ಕಳದಲ್ಲಿ ಬಿಜೆಪಿ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ಬಿಜೆಪಿ ಮೇಲ್ನೋಟಕ್ಕೆ ಅಲ್ಪಸಂಖ್ಯಾತರನ್ನು ವಿರೋಧಿಸುವ ಪಕ್ಷವಾಗಿ ಮೇಲ್ನೋಟಕ್ಕೆ ಕರೆಯಿಸಿಕೊಳ್ಳುತ್ತಿದೆಯಾದರೂ, ವಾಸ್ತವಾಗಿ ...